ಹುಬ್ಬಳ್ಳಿ-ಧಾರವಾಡ

ಸಾಂಸ್ಕೃತಿಕ ಭಯೋತ್ಪಾದನೆ ಮೂಲಕ ಬಿಜೆಪಿ ಜನರನ್ನು ಪ್ರಚೋದಿಸುತ್ತಿದೆ: ಸಿದ್ದರಾಮಯ್ಯ

ಹುಬ್ಬಳ್ಳಿ: ‘ಸಾಂಸ್ಕೃತಿಕ ಭಯೋತ್ಪಾದನೆ ಮೂಲಕ ಬಿಜೆಪಿ ಜನರನ್ನು ಪ್ರಚೋದಿಸುತ್ತಿದೆ. ಪಠ್ಯಪುಸ್ತಕ  ಪರಿಷ್ಕರಣೆ ವಿಚಾರದಲ್ಲಿ ಅದನ್ನು ವ್ಯವಸ್ಥಿತವಾಗಿ ಮಾಡಲಾಗುತ್ತಿದೆ. ಇತಿಹಾಸವನ್ನು ತಿರುಚಲಾಗಿದೆ. ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತಲಾಗುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು, ‘ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಸವರಾಜ ಗುರಿಕಾರ ಗೆಲುವು ಸಾಧಿಸಲಿದ್ದಾರೆ. ಅವರಿಗೆ ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ’ ಎಂದರು.

‘ಸಿದ್ದರಾಮಯ್ಯ ಅವರಿಂದ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಿಲ್ಲ’ ಎಂಬ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಅವರಿಂದ ನಾನೂ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಿಲ್ಲ’ ಎಂದರು.

ಪಿಎಸ್‌ಐ ಅಭ್ಯರ್ಥಿಗಳಿಂದ ಭೇಟಿ: ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪಿಎಸ್‌ಐ ಪರೀಕ್ಷೆ ಪಾಸಾದ ಅಭ್ಯರ್ಥಿಗಳು, ಹಗರಣದಲ್ಲಿ ನ್ಯಾಯಯುತವಾಗಿ ಪರೀಕ್ಷೆ ಬರೆದ ಪ್ರತಿಭಾವಂತರಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ‘ಪ್ರತಿಭಾವಂತ ಅಭ್ಯರ್ಥಿಗಳ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಮರುಪರೀಕ್ಷೆಗೆ ಮುಂದಾಗಿದ್ದು ಸರಿಯಲ್ಲ. ಅವರು ಏನೇ ಮಾಡಿದರೂ, ನಾವು ಹೋರಾಟ ಮಾಡುತ್ತೇವೆ. ಕಾನೂನು ಹೋರಾಟಕ್ಕೂ ಸಿದ್ದರಿದ್ದು, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದರು.

Gayathri SG

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

16 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

43 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

52 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago