News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಸಿದ್ದರಾಮಯ್ಯನವರ ಇತ್ತೀಚೆಗಿನ ಹೇಳಿಕೆಗಳು ಬಹಳ ನಿರಾಸೆ ತಂದಿವೆ; ಸಿಎಂ ಬೊಮ್ಮಾಯಿ

Basavaraj Bommai
Photo Credit :

ಹುಬ್ಬಳ್ಳಿ : ಮುಖ್ಯಮಂತ್ರಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.

ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ತೆರಳುವ ಮೊದಲು ಆದರ್ಶ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯನವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಇತ್ತೀಚೆಗಿನ ಅವರ ಹೇಳಿಕೆಗಳು ಬಹಳ ನಿರಾಸೆ ತಂದಿವೆ’ ಎಂದರು.

‘ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪಕ್ಷದ ಶಾಸಕರು ಹಾಗೂ ಮುಖಂಡರ ಜೊತೆ ಸಭೆ ನಡೆಸುವೆ. ಅಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಲಖನ್ ಜಾರಕಿಹೊಳಿ ಸ್ಪರ್ಧೆ ನಮ್ಮ ಮೇಲೆ ಏನೂ ಪರಿಣಾಮ ಬೀರುವುದಿಲ್ಲ’ ಎಂದರು.

‘ರಾಜ್ಯದಲ್ಲಿ ಜಿನೋಮ್‌ ಸೀಕ್ವೆನ್ಸಿಂಗ್‌ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲು ಯೋಜನೆ ರೂಪಿಸಲಾಗಿದ್ದು, ಈ ಕುರಿತು ಪರಿಣತರ ಜೊತೆ ಚರ್ಚಿಸಲಾಗಿದೆ. ಕೇಂದ್ರಗಳ ಹೆಚ್ಚಳಕ್ಕೆ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಆದಷ್ಟು ಬೇಗ ವರದಿ ಮಾಡುವಂತೆ ಮಾಡುತ್ತೇವೆ’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು