ಹುಬ್ಬಳ್ಳಿಯಲ್ಲಿ ಏ.23ರವರೆಗೆ ನಿಷೇಧಾಜ್ಞೆ ಅವಧಿ ವಿಸ್ತರಣೆ

ಹುಬ್ಬಳ್ಳಿ:ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಏ.23ರವರೆಗೆ ನಿಷೇಧಾಜ್ಞೆ ಮುಂದುವರೆಸಿ ಹು-ಧಾ ಅವಳಿ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ.

ಏ.17ರ ರಾತ್ರಿ ನಡೆದಿದ್ದ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.20ರ ವರೆಗೆ ನಿಷೇಧಾಜ್ಞೆ ಜರಿಗೊಳಿಸಲಾಗಿತ್ತು. ಸದ್ಯ ಈ ನಿಷೇಧಾಜ್ಞೆಯ ಅವಧಿ ವಿಸ್ತರಿಸಿದ ಆದೇಶ ನೀಡಲಾಗಿದ್ದು, ಏ.23ರವರೆಗೆ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ.

ಹಳೆ ಹುಬ್ಬಳ್ಳಿ ಠಾಣೆ ಸೇರಿದಂತೆ ದಕ್ಷಿಣ ವಿಭಾಗದ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಅವಧಿ ವಿಸ್ತರಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ.

115 ಜನರ ಬಂಧನ: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮೂರು ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಇಳಿದ ಪೊಲೀಸರು ಈವರೆಗೆ 115 ಜನರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪೊಲೀಸರನ್ನೇ ಗುರಿಯಾಗಿಸಿಕೊಂಡು ದಾಂಧಲೆ ಮಾಡಿದ್ದ ಪುಂಡರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇಲ್ಲಿಯವರೆಗೂ 200ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅದರಲ್ಲಿ ಇದೀಗ 115 ಜನರನ್ನು ಬಂಧಿಸಲಾಗಿದೆ. ಸದ್ಯ ಗಲಭೆಗೆ ಕಾರಣರಾದ ಮತ್ತಷ್ಟು ಗಲಭೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Swathi MG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

6 hours ago