ಹುಬ್ಬಳ್ಳಿಯಿಂದ ಮಂಗಳೂರು ,ಮೈಸೂರಿಗೆ ಮೇ 1ರಿಂದ ವಿಮಾನ ಸೇವೆ ಆರಂಭ

ಮಂಗಳೂರು: ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭಸುದ್ದಿ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭಿಸಲು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ಇಂಡಿಗೋ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದರು.

ಸಚಿವರ ಮನವಿಗೆ ಸ್ಪಂದಿಸಿದ ಇಂಡಿಗೋ ಸಂಸ್ಥೆಯವರು ಇದೇ ಮೇ 1ರಿಂದ ವಾರದಲ್ಲಿ 4 ದಿನ ಮಂಗಳೂರಿಗೆ ಮತ್ತು ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲಿದ್ದಾರೆ ಎಂದು ಸಚಿವರ ದೆಹಲಿ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರಗಳಿಗೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇದನ್ನು ಸಾಧ್ಯವಾಗಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಮತ್ತು ಇಂಡಿಗೋದ ಆಡಳಿತ ವರ್ಗಕ್ಕೆ ಸಚಿವ ಜೋಶಿಯವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

Sneha Gowda

Recent Posts

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

16 mins ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

51 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

1 hour ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

1 hour ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

2 hours ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

2 hours ago