ಹುಬ್ಬಳ್ಳಿ : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗ್ತಿದ್ದು, ಸಧ್ಯ ಹುಬ್ಬಳ್ಳಿಯ ಮತ್ತೊಂದು ಕಾಲೇಜಿನಲ್ಲಿ ಕೊರೊನಾ ಸ್ಫೋಟವಾಗಿದೆ.
ಹುಬ್ಬಳ್ಳಿಯ ಕಾಡಸಿದ್ದೇಶ್ವರ ಕಾಲೇಜಿನಲ್ಲಿ 15ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕಾಲೇಜನ್ನ ಸೀಲ್ಡೌನ್ ಮಾಡಲಾಗಿದೆ. ಇನ್ನು ಕಾಲೇಜಿನ ಸಿಬ್ಬಂದಿಗೆ, ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆಯಾಗಿದ್ದು, ಮುಂದಿನ ಆದೇಶದವರೆಗೆ ಕಾಲೇಜು ಸೀಲ್ ಡೌನ್ ಆಗಲಿದೆ.
ಈ ಮಧ್ಯೆ ಒಟ್ಟಾರೇ ರಾಜ್ಯದಲ್ಲಿ ಇಂದು ಕೊರೊನಾ ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 28,723 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 2,21,205 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 20,121 ಸೇರಿದಂತೆ ರಾಜ್ಯಾದ್ಯಾಂತ 28,723 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ’ ಎಂದು ತಿಳಿಸಿದ್ದಾರೆ.