ಹುಬ್ಬಳ್ಳಿ ಗಲಭೆ ಪ್ರಕರಣ ; ಸ್ಟೇಟಸ್ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ

ಹುಬ್ಬಳ್ಳಿ, ಏ. 18 : ಹುಬ್ಬಳ್ಳಿಯ ಹಳೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಯುವಕನ ಪೋಷಕರನ್ನು ಸುರಕ್ಷಿತ ಸ್ಥಳಕ್ಕೆ ಕಳಿಸಲಾಗಿದ್ದು, ಪೊಲೀಸ್ ಭದ್ರತೆ ನೀಡಲಾಗಿದೆ.

ಸೋಮವಾರ ಹುಬ್ಬಳ್ಳಿಯ ನ್ಯಾಯಾಲಯಕ್ಕೆ ಪೊಲೀಸರು ಯುವಕ ಅಭಿಷೇಕ್ ಹಿರೇಮಠ ಹಾಜರುಪಡಿಸಿದ್ದರು. ಕೋರ್ಟ್ ಆರೋಪಿಯನ್ನು ಏಪ್ರಿಲ್ 30ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು.

ಅಭಿಷೇಕ್ ಹಿರೇಮಠ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದರು. ಸರ್ಕಾರಿ ವಕೀಲರು ಇಂದು ಆಕ್ಷೇಪಣೆ ಸಲ್ಲಿಕೆ ಮಾಡಲಿಲ್ಲ. ಮಂಗಳವಾರ ಆಕ್ಷೇಪಣೆ ಸಲ್ಲಿಕೆ ಮಾಡುವ ನಿರೀಕ್ಷೆ ಇದೆ.

ಆರೋಪಿ ಅಭಿಷೇಕ್ ಹಿರೇಮಠ ವಾಟ್ಸಪ್‌ನಲ್ಲಿ ಎಡಿಟ್‌ ಮಾಡಿದ ಪ್ರಚೋದನಾಕಾರಿ ಪೋಸ್ಟರ್‌ ಹಾಕಿದ್ದರಿಂದ ಹುಬ್ಬಳ್ಳಿಯಲ್ಲಿ ಗಲಭೆ ಉಂಟಾಗಿತ್ತು. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಆಸ್ಪತ್ರೆ, ಆಂಜನೇಯ ದೇವಾಲಯದ ಮೇಲೆ ಕಲ್ಲು ತೂರಲಾಗಿತ್ತು.

ಅಭಿಷೇಕ್ ಹಿರೇಮಠ ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಎಡಿಟ್ ಮಾಡಿದ ಪೋಸ್ಟರ್ ಸ್ಟೇಟಸ್ ಹಾಕಿಕೊಂಡಿದ್ದ. ತಲೆ ಕೆಟ್ಟರೆ ಇಲ್ಲೂ ಭಗವಾಧ್ವಜ ಹಾರಿಸುವೆ. ಜೈ ಶ್ರೀರಾಮ್, ಹಿಂದೂ ಸಾಮ್ರಾಟ್ ಎಂದು ಬರೆದುಕೊಂಡಿದ್ದ.

ಈ ಪೋಸ್ಟರ್ ಕುರಿತು ಹುಬ್ಬಳ್ಳಿ ಅಂಜುಮನ್ ಸಮಿತಿಗೆ ಮಾಹಿತಿ ಬಂದ ಬಳಿಕ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ಒಂದು ಸಮುದಾಯದವರು ಜಮಾವಣೆಗೊಂಡರು. ಆರೋಪಿ ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದರು.

ಹೆಚ್ಚು ಜನರು ಜಮಾವಣೆಗೊಳ್ಳುತ್ತಿದ್ದಂತೆ ಪೊಲೀಸರ ಜೊತೆ ವಾಗ್ವಾದ ನಡೆದಿತ್ತು. ಬಳಿಕ ಆಸ್ಪತ್ರೆ, ಆಂಜನೇಯ ದೇಗುಲದ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಪೊಲೀಸರ ಮೇಲೆ ಸಹ ಕಲ್ಲು ತೂರಾಟ ನಡೆಸಿದ್ದು, 10ಕ್ಕೂ ಅಧಿಕ ಸಿಬ್ಬಂದಿ ಗಾಯಗೊಂಡರು.

ಶನಿವಾರ ರಾತ್ರಿಯೇ ಸ್ಟೇಟಸ್ ಹಾಕಿದ್ದ ಆರೋಪಿ ಅಭಿಷೇಕ್ ಹಿರೇಮಠ ಬಂಧಿಸಿದ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದರು. ಸೋಮವಾರ ಆರೋಪಿಯನ್ನು ನ್ಯಾಯಾಲಯದ ಮುಂದೆ ಬಿಗಿ ಭದ್ರತೆಯಲ್ಲಿ ಹಾಜರುಪಡಿಸಲಾಯಿತು.

ಪೋಷಕರಿಗೆ ಭದ್ರತೆ ಅಭಿಷೇಕ್ ಹಿರೇಮಠ ಪೋಷಕರಿಗೆ ಸಹ ಪೊಲೀಸ್ ಭದ್ರತೆ ನೀಡಲಾಗಿದೆ. ಅವರನ್ನು ಸುರಕ್ಷಿತ ಸ್ಥಳಕ್ಕೆ ಪೊಲೀಸರು ಕಳುಹಿಸಿದ್ದಾರೆ. ಹುಬ್ಬಳ್ಳಿಯ ಬ್ಯಾಹಟ್ಟಿಯಲ್ಲಿ ಅಭಿಷೇಕ್ ವಾಸವಾಗಿದ್ದ.

ಕಲ್ಲು ತೂರಾಟ ಸಂಬಂಧ ಆರೋಪಿಗಳನ್ನು ಬಂಧಿಸಲು 8 ತಂಡಗಳನ್ನು ರಚನೆ ಮಾಡಲಾಗಿದೆ. ಆದರೆ ಸಿಸಿಟಿವಿ ಕ್ಯಾಮರಾಗಳು ಕೈ ಕೊಟ್ಟಿವೆ. 48 ಸಿಸಿಟಿವಿ ಕ್ಯಾಮರಾಗಳ ಪೈಕಿ 21 ಮಾತ್ರ ಕಾರ್ಯ ನಿರ್ವಹಣೆ ಮಾಡುತ್ತಿತ್ತು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago