News Karnataka Kannada
Friday, May 10 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ಗಲಭೆ: ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರಗ ಜ್ಞಾನೇಂದ್ರ

Hampi: There is no proposal before the government to hand over chandrasekhar's death case to CID
Photo Credit :

ಹುಬ್ಬಳ್ಳಿ, ಏ.18 : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಲ್ಲು ತೂರಾಟ, ದಾಂಧಲೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು. ಗಲಭೆ ಕುರಿತು ಮಹಾನಗರ ಪೊಲೀಸ್ ಆಯುಕ್ತ ಲಾಭೂರಾಮ ಅವರಿಂದ ಮಾಹಿತಿ ಪಡೆದರು.

ನಂತರ ಕೆಲ ಸಂಘಟನೆಗಳ ಪ್ರಮುಖರು ಗೃಹ ಸಚಿವರನ್ನು ಭೇಟಿಯಾಗಿ ಪೊಲೀಸ್ ಠಾಣೆ, ದೇವಸ್ಥಾನ, ಆಸ್ಪತ್ರೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಭಯದ ವಾತಾವರಣ ಸೃಷ್ಟಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪೊಲೀಸರು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ಈಗಾಗಲೇ ಗಲಭೆಯಲ್ಲಿ ಪಾಲ್ಗೊಂಡಿದ್ದವರನ್ನು ಗುರುತಿಸಿ ಬಂಸಲಾಗುತ್ತಿದೆ. ನಗರದಲ್ಲಿ ಶಾಂತಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಎಲ್ಲರೂ ಶಾಂತಿ ಕಾಪಾಡುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಭೆ ನಂತರ ಸುದ್ದಿಗಾರರಗೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಕಲ್ಲು ತೂರಾಟ ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪರೆಡ್ಡಿ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆಯಲಿದೆ.

ಪ್ರಕರಣದಲ್ಲಿ ಪಾಲ್ಗೊಂಡಿದ್ದವರು ಯಾವ ಮತೀಯ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಗಲಭೆ ಹಿನ್ನೆಲೆ ಏನು ಎನ್ನುವ ಸಂಪೂರ್ಣ ತನಿಖೆಯಾಗಲಿದೆ. ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು