ಹುಬ್ಬಳ್ಳಿ ಗಲಾಟೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ; ರೇಣುಕಾಚಾರ್ಯ

ಹುಬ್ಬಳ್ಳಿ, ಏ. 17 : ‘ಕೇಸರಿ ಧ್ವಜ ಶಾಂತಿಯ ಸಂಕೇತ. ಮಸೀದಿ ಮೇಲೆ ಭಗವಾಧ್ವಜ ಹಾರಿಸಿದರೆ ಏನು ತಪ್ಪು?’ ಎಂದು ಶಾಸಕ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಇಂದು ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ ಗಲಾಟೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಭಗವಾಧ್ವಜ ಹಾರಿಸುವುದರಲ್ಲಿ ತಪ್ಪೇನಿದೆ? ಇನ್ನು ಮುಂದೆ ಈ ರೀತಿ ಮಾಡಿದರೆ ಹಿಂದುಗಳು ಏನು ಎಂದು ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯುವಕ ಹಾಕಿದ ಪ್ರಚೋದನಾಕಾರಿ ಪೋಸ್ಟರ್‌ನಿಂದಾಗಿ ಹುಬ್ಬಳ್ಳಿಯಲ್ಲಿ ವಿವಾದ ಉಂಟಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜೊತೆಗೆ ಆರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಹೇಳಳಾಗುತ್ತಿದೆ. ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರವನ್ನು ಎಡಿಟ್ ಮಾಡಿ ಯುವಕನೊಬ್ಬ ಸ್ಟೇಟಸ್ ಹಾಕಿಕೊಂಡಿದ್ದ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಚಿತ್ರ ವೈರಲ್ ಆಗುತ್ತಿದ್ದಂತೆ ಒಂದು ಕೋಮಿನವರು ಕಲ್ಲು ತೂರಾಟ ನಡೆಸಿದರು.

Gayathri SG

Recent Posts

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

8 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

31 mins ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

42 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

55 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

2 hours ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

2 hours ago