ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಈಗಾಗಲೇ ಹಲವು ಕಂಪನಿಗಳು ಕಾರ್ಯರಂಭ ಮಾಡುತ್ತಿವೆ. ಅವಳಿನಗರದಲ್ಲಿ ಸುಮಾರು 25 ಸಾವಿರ ಕೋಟಿ ಹೂಡಿಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ನೆಹರು ಮೈದಾನದಲ್ಲಿ 75 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಪ್ಲೇಕ್ಸ್ ಕಂಪನಿ ಕಾರ್ಯವನ್ನು ಆರಂಭಿಸಿದೆ. ರಾಜೇಶ ಎಲೆಕ್ಟಿçಕ್ ವಾಹನ ತಯಾರಿಕೆ ಕಂಪನಿಗೆ 150 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಸದ್ಯದಲ್ಲಿ ಯೇ ಕಂಜೂಮರ್ ಎಲೆಕ್ಟಿçಕ್ ಗೂಡ್ಸದ ಕ್ಲಸ್ಟರ್ ಪ್ರಾರಂಭವಾಗುತ್ತಿದೆ. ಇದು ನಿರುದ್ಯೋಗಿ ಯುವಕರಿಗೆ ಹಾಗೂ ಈ ಭಾಗದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.
ಅಲ್ಲದೆ ಅವಳಿ ನಗರದಲ್ಲಿ ಸ್ಥಗಿತವಾಗಿರುವ ರಸ್ತೆ ಕಾಮಗಾರಿಗಳ ಕುರಿತು ಈಗಾಗಲೇ ನೂತನ ಲೋಕಪಯೋಗಿ ಸಚಿವ ಸಿಸಿ ಪಾಟೀಲ್ ಅವರೊಂದಿಗೆ ಮಾತಾಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ0ದರು.