18 ಕೋಟಿ ಹಣ ಪತ್ತೆ : ಐಟಿ ಅಧಿಕಾರಿಗಳು ಎಸ್‌ಬಿಐಗೆ ರವಾನೆ

ಧಾರವಾಡ: ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುರವರ ಅವರ ಮನೆಯಲ್ಲಿ ಜಪ್ತಿ ಮಾಡಲಾದ 18 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿರುವ ಘಟನೆ ನಡೆದಿದೆ.

ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಅವರ ಮನೆಯಲ್ಲಿ ಮದ್ಯ ಶೇಖರಿಸಿ ಇಡಲಾಗಿದೆ ಎಂಬ ಶಂಕೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಅವರ ಮನೆಯಲ್ಲಿ 18 ಕೋಟಿ ರೂ. ಬೃಹತ್ ಮೊತ್ತದ ಹಣ ಪತ್ತೆಯಾಗಿತ್ತು. ಕೂಡಲೇ ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿತ್ತು.

20 ಜನ ಅಧಿಕಾರಿಗಳು ದತ್ತುನವರ ಮನೆಯಲ್ಲಿ ನಿನ್ನೆ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಮಶಿನ್ ಮುಖಾಂತರ ಹಣ ಎಣಿಕೆ ಮಾಡಿದ್ದಾರೆ. ಇಂದು ಮಧ್ಯಾಹ್ನದವರೆಗೂ ಅಧಿಕಾರಿಗಳು ತಪಾಸಣೆ ನಡೆಸಿ 18 ಕೋಟಿ ರೂ. ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿ ಪೊಲೀಸ್ ಭದ್ರತೆ ಮಧ್ಯೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಸಾಗಿಸಿದ್ದಾರೆ.

ಬಸವರಾಜ ದತ್ತುನವರ ತಾನು ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದರಿಂದ ಐಟಿ ಅಧಿಕಾರಿಗಳು ಶೆಟ್ಟಿ ಅವರ ಕಚೇರಿ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು.

ಇಂದು ಮಧ್ಯಾಹ್ನ 2 ಗಂಟೆವರೆಗೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿ ಎರಡು ಪೊಲೀಸ್ ಎಸ್ಕಾರ್ಟ್ ವಾಹನದ ಸಮೇತ ಭದ್ರತೆಯೊಂದಿಗೆ 18 ಕೋಟಿ ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿಕೊಂಡು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿದ್ದಾರೆ.

Chaitra Kulal

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

21 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

38 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

59 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago