ಹುಬ್ಬಳ್ಳಿ: ಮನೆಯೊಂದರಲ್ಲಿ ಸಾಕಿದ್ದ ಪಾರಿವಾಳಗಳ ಕುತ್ತಿಗೆ ಕತ್ತರಿಸಿ ಕೊಂದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಯಾವಗಲ್ ಪ್ಲಾಟ್ನಲ್ಲಿ ನಡೆದಿದೆ. ಕಿಡಿಗೇಡಿಗಳು 23 ಪಾರಿವಾಳಗಳನ್ನ ಸಾಯಿಸಿದ್ದಾರೆ.
ರಾಹುಲ್ ದಾಂಡೇಲಿ ಅವರಿಗೆ ಸೇರಿದ 23 ಪಾರಿವಾಳಗಳಾಗಿದ್ದು, ಚಾಕು ಬಳಸಿ ಕುತ್ತಿಗೆ ಕಟ್ ಮಾಡಿ ಕೊಂದಿದ್ದಾರೆ. ಬಳಿಕ ಪಾರಿವಾಳಗಳನ್ನು ಅಲ್ಲಲ್ಲೇ ಬೀಸಾಕಿ ಹೋಗಿದ್ದಾರೆ.
ರಾಹುಲ್ ಕಳೆದ ಆರು ತಿಂಗಳಿಂದ ಪಾರಿವಾಳ ಸಾಕಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಪಾರಿವಾಳ ಸಾಯಿಸಿ ಕಿರಾತಕರು ಪರಾರಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆ ಪಾರಿವಾಳ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಈ ಘಟನೆ ರಾಹುಲ್ಗೆ ಗೊತ್ತಾಗುತ್ತಿದ್ದಂತೆಯೇ ಹುಬ್ಬಳ್ಳಿಯ ಉಪನಗರ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪಾರಿವಾಳಗಳನ್ನು ಸಾಯಿಸಿದವರನ್ನ ಕೂಡಲೇ ಅರೆಸ್ಟ್ ಮಾಡಬೇಕೆಂದು ಆಗ್ರಹಿಸಿ ದೂರು ಸಲ್ಲಿಸಿದ್ದಾರೆ.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…