ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ 3 ದಿನ ಅವಕಾಶ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆಗೆ ಜಯ ಸಿಕ್ಕಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಬಿಜೆಪಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು ಹಾಗೂ ಹಿಂದೂ ಸಂಘಟನೆಗಳು ನಿರಂತರ ಈದ್ಧಾ ಮೈದಾನದಲ್ಲಿ ಗಣೇಶ್ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಈಗ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ನೀಡಿದ್ದಾರೆ. ಮೂರು ದಿನಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಿದ್ದು, 19,20,21 ರಂದು ಮೂರು ದಿನಗಳ ಕಾಲ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಿದ್ದಾರೆ. ಅನುಮತಿ ನೀಡುತ್ತಿದ್ದಂತೆ ಹೋರಾಟಗಾರರು ಜಯಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಇನ್ನು, ಈದ್ಲಾ ಮೈದಾನದಲ್ಲಿ ಗಣೇಶ್ ಪ್ರತಿಷ್ಠಾಪನೆ ವಿರೋಧಿಸಿ 24 ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಕಳೆದ ವರ್ಷದಂತೆ ಈ ವರ್ಷವೂ ಅನುಮತಿ ನೀಡಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದವು. ಅಲ್ಲದೇ, ಅಂಜುಮನ್ ಇಸ್ಲಾಂ ಸಂಸ್ಥೆ ಧಾರವಾಡ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಇಂದು ಧಾರವಾಡ ಹೈಕೋರ್ಟ್‌ ಅರ್ಜಿಯನ್ನು ವಜಾ ಮಾಡಿದೆ.

ಸೆಪ್ಟೆಂಬರ್ 19 ರಂದು ಬೆಳಿಗ್ಗೆ 6 ಗಂಟೆಯಿಂದ 21 ರಂದು ಮಧ್ಯಾಹ್ನ 12 ಗಂಟೆಯವರೆಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ. 30*30 ಅಳತೆಯ ಪೆಂಡಾಲ, ಗಣೇಶ ಉತ್ಸವದ ಹೊರತಾಗಿ ಯಾವುದೇ ಬಾವುಟ, ಬಿತ್ತಿಪತ್ರ, ವಿವಾದಿತ ಫೋಟೋ ಪ್ರದರ್ಶನ ನಿಷೇಧ ಮಾಡಲಾಗಿದೆ. ಮನರಂಜನಾ ಕಾರ್ಯಕ್ರಮಗಳಿಗೂ ನಿಷೇಧ ವಿಧಿಸಲಾಗಿದೆ. ಅನಾವಶ್ಯಕ ಗಲಭೆ, ಗಲಾಟೆಗಳು ಆದ್ರೆ ಆಯೋಜಕರೆ ಹೊಣೆಯಾಗ್ತಾರೆ. ಅನ್ಯಧರ್ಮೀಯರಿಗೆ ಭಾವನೆಗಳಿಗೆ ಧಕ್ಕೆ ತರುವಂತಿಲ್ಲ, ಪ್ರಚೋದನಕಾರಿ ಹೇಳಿಕೆ, ಭಾಷಣ ನಿಷೇಧ ಸೇರಿದಂತೆ 18 ಷರತ್ತುಗಳನ್ನು ವಿಧಿಸಿ ಮಹಾನಗರ ಪಾಲಿಕೆ ಅನುಮತಿ ನೀಡಿದೆ.

Gayathri SG

Recent Posts

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

23 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

51 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

1 hour ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

1 hour ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

2 hours ago