News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಸಮತೋಲಿತ, ದೂರದೃಷ್ಟಿಯ ಬಜೆಟ್ – ವಿನಯ ಜವಳಿ

A balanced and far-sighted budget - Vinay Textiles
Photo Credit : News Kannada

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,  ಶುಕ್ರವಾರ ಮಂಡಿಸಿರುವ 2023-24 ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸ್ವಾಗತಿಸಿದೆ.

ಈ ಬಗ್ಗೆ ಮಾಧ್ಯಮಗೋಷ್ಠಿ ಏರ್ಪಡಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ, ಇದೊಂದು ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಆಗಿದೆ. ಜೊತೆಗೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಕೃಷಿ, ಉದ್ಯಮ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಸೇರಿದಂತೆ ಅನೇಕ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.

ಈ ಬಜೆಟ್ ನಲ್ಲಿ ಶಿಕ್ಷಣಕ್ಕೆ 20%ರಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ. ರೈತರಿಗೆ 3 ರಿಂದ 5 ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಲು ಘೋಷಣೆ ಮಾಡಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟು ಮಾಡಲಾಗಿದ್ದು, ಸುಮಾರು 428 ನಮ್ಮ ಕ್ಲಿನಿಕ್ ಸ್ಥಾಪನೆ ಮಾಡುವುದು, ಶಿಕ್ಷಣ ಕ್ಷೇತ್ರದಲ್ಲಿ 7 ಹೊಸ ವಿಶ್ವವಿದ್ಯಾಲಯ, ಒಂದು ವೈದ್ಯಕೀಯ ಕಾಲೇಜು ಸ್ಥಾಪನೆ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.

ಉತ್ತರ ಕರ್ನಾಟಕಕ್ಕೆ ಈ ಬಜೆಟ್ ನಲ್ಲಿ ಮಹದಾಯಿಗೆ 1 ಸಾವಿರ ಕೋಟಿ, ಕಳಸಾ-ಬಂಡೂರಿ ಗೆ 80 ಕೋಟಿ ಅನುದಾನವನ್ನು ಘೋಷಣೆ ಮಾಡಲಾಗಿದೆ. ಈ ಭಾಗದ ರೈತರಿಗೆ ಇದರಿಂದ ಹೆಚ್ಚಿನ ಅನುಕೂಲ ಆಗಲಿದೆ ಎಂದರು.

ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಒತ್ತು ನೀಡಲಾಗಿದೆ. ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಶಾಲಾ ವಿದ್ಯಾರ್ಥಿಗಳು, ಯುವಕರಿಗೆ ಬಜೆಟ್ ನಲ್ಲಿ ಪ್ರೋತ್ಸಾಹ ನೀಡಲಾಗಿದೆ. ಈ ಬಜೆಟ್ ದೂರದೃಷ್ಟಿಯ ಬಜೆಟ್ ಆಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು