ಹುಬ್ಬಳ್ಳಿ: ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ, ಮುಂದೆ ಇಂಥ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು ಅಂಥ ಶಿಕ್ಷೆ ನನ್ನ ಮಗನಿಗೆ ಆಗಲಿ ಎಂದು ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ತಂದೆ ಬಾಬಾ ಸಾಹೇಬ್ ಸುಬಾನಿ ಕಣ್ಣೀರು ಹಾಕಿದ್ದಾರೆ.
ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ದಯವಿಟ್ಟು ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ನನ್ನನ್ನು ಕ್ಷಮಿಸಬೇಕು ಎಂದು ಕೈ ಮುಗಿದು ಬೇಡಿಕೊಂಡರು.
ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು, ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಾರೆ. ಅವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆಯಾಚಿಸುತ್ತೇನೆ.
ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆಯಾಗಿದೆ. ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡುವಂತೆ ಕಣ್ಣೀರಾಕುತ್ತಲೇ ಭವಾನಿ ಮನವಿ ಮಾಡಿದ್ದಾರೆ.
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…