ಹುಬ್ಬಳ್ಳಿ-ಧಾರವಾಡ

ವಿಮಾನ ನಿಲ್ದಾಣ ಉನ್ನತೀಕರಣ: ಸಚಿವ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಗೆ ಸ್ಪಂದಿಸಿ ಕೇಂದ್ರ ಸರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವರು, ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸಲು ಚಿಂತನೆ ನಡೆಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ ಅತೀ ದೊಡ್ಡ ನಗರವಾಗಿದ್ದು ಹಾಗೂ ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (IIIT) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಂತಹ ಬೃಹತ್ ಸಂಸ್ಥೆಗಳ ಕಾರ್ಯಾರಂಭ ಹಾಗೂ ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆ ಹಿನ್ನೆಲೆಯಲ್ಲಿ ಸಚಿವರು ಈಗಿರುವ ಟರ್ಮಿನಲ್ ಕಟ್ಟಡದ ವಿಸ್ತೀರ್ಣ, ರನ್‌ವೇ ವಿಸ್ತೀರ್ಣ, ಆಪಾನ್ ವಿಸ್ತೀರ್ಣ ಹಾಗೂ ಕಾರ್ಗೋ ನಿರ್ವಹಣೆ ಸುಧಾರಣೆ ಮುಂತಾದ ಕಾರ್ಯ ಕೈಗೊಳ್ಳಲು ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕಳೆದ ತಿಂಗಳಷ್ಟೇ ಬರೆದ ಪತ್ರಕ್ಕೆ ಉತ್ತರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಎಲ್ಲಾ ಸುಧಾರಣಾ ಕಾರ್ಯದ ಪ್ರಸ್ತಾವನೆ ತೀವ್ರ ಪರಿಶೀಲನೆ ನಡೆಸಿ ಈ ಒಂದು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ನೂತನ ಯೋಜನೆಯಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ. ವಿಸ್ತರಣೆಗೊಳ್ಳಲಿದ್ದು, ಏಕಕಾಲಕ್ಕೆ 1400ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ.

ಇನ್ನೂ ಕೇಂದ್ರ ಸಚಿವ ಜೋಶಿಯವರು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ವಿಮಾನ ನಿಲ್ದಾಣ ಸಲಹಾ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇತ್ತೀಚಿನ ದಿನಗಳಲ್ಲಿ ಕೈಗೊಂಡ ಅಭಿವೃದ್ಧಿ ಚಟುವಟಿಕೆಗಳಿಂದಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣ ಅಗಾಧ ಬೆಳವಣಿಗೆ ಕಂಡಿದೆ. ಈ ಬಗ್ಗೆ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ.

ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣ ಸಾಕಷ್ಟು ನವೀಕರಣ ಕಾಣಲಿದ್ದು, ಇದು ಪ್ರಯಾಣಿಕರಿಗೆ ಅದ್ಭುತ ಅನುಭವವನ್ನು ನೀಡಲಿದೆ. ಮತ್ತು ಕಾರ್ಗೋ ವಿಭಾಗದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಸಾಧನೆಯು ತನ್ನ ಗಮ್ಯಸ್ಥಾನ ವಿಸ್ತರಿಸಲಿದೆ. ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

6 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

24 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

29 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

39 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

59 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago