ವಸತಿ ನಿಲಯಗಳಿಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಧಾರವಾಡ : ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಪ್ರಸಕ್ತ ಸಾಲಿಗೆ ಪ.ಜಾ. ಪ.ವರ್ಗ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಹೊಸದಾಗಿ ಪ್ರವೇಶ ಬಯಸುವವರಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https:/shp.karnataka.gov.in ನಲ್ಲಿ ಆನ್‍ಲೈನ್ ಮೂಲಕ ಜುಲೈ 15 ರೂಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆ ವೆಬ್‍ಸೈಟ್ ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ  jd.edn.swd@gmail.com or dd.ednswd@gmail.com ಇ-ಮೇಲ್ ಮುಖಾಂತರ ಅಥವಾ ಅಪರ ನಿರ್ದೇಶಕರು, ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ಹಾಗೂ ನವಲಗುಂದ ರವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಜಿಲ್ಲೆಯ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ, ಅಪರ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರನ್ನು ಹಾಗೂ ಕಚೇರಿ ದೂರವಾಣಿ 0836-2447201 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ashitha S

Recent Posts

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

13 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

40 mins ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

55 mins ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

1 hour ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

2 hours ago