News Karnataka Kannada
Saturday, May 18 2024
ಹುಬ್ಬಳ್ಳಿ-ಧಾರವಾಡ

ಅಲ್ಪಸಂಖ್ಯಾತರಿಗೆ ವಿದ್ಯಾಭ್ಯಾಸಕ್ಕಾಗಿ ಅರಿವು ವಿದೇಶಿ ಸಾಲ ಅರ್ಜಿ ಆಹ್ವಾನ

Applications invited for one post of District Planning Assistant
Photo Credit : News Kannada

ಧಾರವಾಡ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಧಾರವಾಡ ಇವರ ವತಿಯಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದೇಶಿ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸಕ್ಕಾಗಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದೇಶಿ ಸಾಲ ಯೋಜನೆಯಡಿಯಲ್ಲಿ ವಿದೇಶಿದಲ್ಲಿ ವ್ಯಾಸಾಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ, ಭಾರತ ದೇಶದ ಪ್ರತಿಷ್ಠಿತ IIT`S, IIM`S, ISC ಸಂಸ್ಥೆಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಆಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್: www.kmdconline.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿ ನಿಗದಿಪಡಿಸಿರುವ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ), 1ನೇ ಮಹಡಿ, ಮೌಲಾನಾ ಆಝಾದ್ ಭವನ, ಸಾಧನಕೇರಿ, ಧಾರವಾಡ ಜಿಲ್ಲೆ ಈ ಕಛೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 13 ರಿಂದ ಪ್ರಾರಂಭಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಕಡೇ ದಿನಾಂಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ:0836-2748226ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಅಕ್ಬರಸಾಬ ಕುರ್ತಕೋಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು