News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಧಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ನಿಷೇಧ: ದಿವ್ಯ ಪ್ರಭು

ಲೋಕಸಭಾ ಸಾರ್ವತ್ರಿಕ ಚುನಾವಣೆಯ ದಿನಾಂಕ ನಿಗದಿಪಡಿಸಿ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಮಾದರಿ ನೀತಿ ಸಂಹಿತೆ ಮಾರ್ಚ್ 16 ರಿಂದ ಜಾರಿಯಲ್ಲಿದೆ.
Photo Credit : NewsKarnataka

ಧಾರವಾಡ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ದಿನಾಂಕ ನಿಗದಿಪಡಿಸಿ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಮಾದರಿ ನೀತಿ ಸಂಹಿತೆ ಮಾರ್ಚ್ 16 ರಿಂದ ಜಾರಿಯಲ್ಲಿದೆ.

ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದನ್ನು ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವಾಲಯ, ಮಂದಿರ, ಚರ್ಚ್, ಮಸೀದಿ ಹಾಗೂ ಪ್ರಾರ್ಥನಾ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುವುದನ್ನು ನಿಷೇಧಿಸಲಾಗಿದೆ. ಇಂತಹ ಧಾರ್ಮಿಕ ಸ್ಥಳಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು