News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಜಗದೀಶ್ ಶೆಟ್ಟರ್

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ನಾಯಕರ ಜೊತೆ ಚರ್ಚಿಸಿ ಬೆಂಗಳೂರನಿಂದ ವಾಪಸ್ ಹುಬ್ಬಳ್ಳಿಯ ನಿವಾಸಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,  ಬೆಳಗಾವಿ ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರಷ್ಟು ಗೆಲ್ಲುತ್ತೇನೆ ಎಂದು  ಹೇಳಿದ್ದಾರೆ. 
Photo Credit : News Kannada

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ನಾಯಕರ ಜೊತೆ ಚರ್ಚಿಸಿ ಬೆಂಗಳೂರನಿಂದ ವಾಪಸ್ ಹುಬ್ಬಳ್ಳಿಯ ನಿವಾಸಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,  ಬೆಳಗಾವಿ ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರಷ್ಟು ಗೆಲ್ಲುತ್ತೇನೆ ಎಂದು  ಹೇಳಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವೆ. ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ ನನ್ನ ಜೊತೆ ಮಾತಾಡಿದ್ದಾರೆ, ಬೆಳಗಾವಿಯಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ, ನಾನು ಸ್ಪರ್ಧಿಸುತ್ತೇನೆ. ನಾನು ಈಗಾಗಲೇ ಬೆಳಗಾವಿ ನಾಯಕರ ಜೊತೆ ಮಾತಾಡಿದ್ದೇನೆ ಎಂದರು.

ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಜತೆ ಮಾತಾಡಿದ್ದೇನೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗೂ ಮಾತನಾಡಿದ್ದೇನೆ. ಅಧಿಕೃತವಾಗಿ ಅಭ್ಯರ್ಥಿ ಘೋಷಿಸಿದ ನಂತರ ತಯಾರಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಕೆಎಸ್​​ ಈಶ್ವರಪ್ಪ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ವರಿಷ್ಠರು ಸಮಾಧಾನ ಮಾಡುತ್ತಾರೆ. ಯಡಿಯೂರಪ್ಪ ಅವರ ಮೇಲೆ ಸುಮ್ನೆ ಸುಳ್ಳು ಕೇಸ್ ಮಾಡಿದ್ದಾರೆ. ಚುನಾವಣೆ ಹಿನ್ನಲೆ ಸುಳ್ಳು ಕೇಸ್ ದಾಖಲೆ ಮಾಡಿದ್ದಾರೆ. ಅದು ಫಾಲ್ಸ್ ಕೇಸ್. ಯಡಿಯೂರಪ್ಪ ಆ ಕೇಸ್​ನಿಂದ ಹೊರಗೆ ಬರುತ್ತಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು