ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಎಸ್ ಡಿಪಿ ಮತ್ತು ಪಿಎಫ್ ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಅಂತ ತೋರಿಸಿದ್ದರು. ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸ್ಟೋಟ್ ಆದಾಗ ಅವರನ್ನು ಬ್ರದರ್ ಅಂತಾ ಕರೆದರು.
ವೋಟ್ ಬ್ಯಾಂಕ್ ಗಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟರು, ಕರ್ನಾಟಕದ ಸಾಮಾನ್ಯ ಜನರ ಬದುಕು ಅಸುರಕ್ಷಿತವಾದರು ಅವರಿಗೆ ತೊಂದರೆ ಇಲ್ಲಾ. ಇಸ್ಲಾಮಿಕರಿಗೆ ಕ್ಲುಲಕ್ ವೋಟ್ ಬ್ಯಾಂಕ್ ಗಾಗಿ ಸಪೋರ್ಟ್ ಮಾಡುತ್ತೀದ್ದಾರೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲ ಇದಕ್ಕೆ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿದರು.