ನನ್ನ ಸೋಲಿಸಲು ಹೋಗಿ ರಾಜ್ಯದಲ್ಲಿ ಬಿಜೆಪಿ ಸೋತಿದೆ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಬರುತ್ತೆ ಅಂದಿದ್ದೆ. ಕಾಂಗ್ರೆಸ್‌ಗೆ ಬೆಂಬಲ ನೀಡಿದ ಕರ್ನಾಟಕ ಜನರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಗೆಲ್ಲಲು ಆಗಿಲ್ಲ, ಜನರ ತೀರ್ಪಿಗೆ ಗೌರವ ಕೊಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನನ್ನು ಸೋಲಿಸಬೇಕು ಅಂತಾ ಹಠ ಮಾಡಿದ್ದವರು ಹಠ ಸಾಧಿಸಿದ್ದಾರೆ. ನನ್ನನ್ನು ಸೋಲಿಸಲು ಹೋಗಿದ್ದ ವ್ಯಕ್ತಿಗಳು ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದವರ ವಿರುದ್ಧ ಚಾಲೆಂಜ್ ಮಾಡಿ ಫೇಸ್ ಮಾಡಿದ್ದೇನೆ. ನಾನು ಸೋತಿದ್ದೇನೆ ಅನ್ನೋ ದುಃಖ ನನಗಿಲ್ಲ ಎಂದರು.

ಲಿಂಗಾಯತ ಸಮುದಾಯ ಕಡೆಗಣಿಸಿದ್ರು ಅನ್ನೋದರ ಪರಿಣಾಮ ಈಗ ಕಿತ್ತೂರು, ಕಲ್ಯಾಣ ಕರ್ನಾಟಕದಲ್ಲಿ ಕಾಣಿಸುತ್ತಿದೆ. ಒಬ್ಬರಿಗೆ ಪೆಟ್ಟು ಕೊಡಲು ಹೋಗಿ ಇಡೀ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರೆ. ರಾಜಕೀಯದಲ್ಲಿ ಕ್ರಿಯಾಶೀಲವಾಗಿದ್ದು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತೇನೆ. 70 ವರ್ಷವಾದ ಮೇಲೆ ನಾನು ಚುನಾವಣಾ ರಾಜಕೀಯದಲ್ಲಿ ಇರಲ್ಲ. ನನಗೀಗ 67 ವರ್ಷ ಮುಂದೆ ಏನಾಗುತ್ತೆ ನೋಡೋಣ ಎಂದರು.

ಬಿಜೆಪಿ ದಕ್ಷಿಣ ಭಾರತದಲ್ಲಿ ಹೇಗೆ ಅವಸಾನ ಆಗುತ್ತಿದೆ ಅಂತಾ ಗೊತ್ತಾಗುತ್ತಿದೆ. ನಾನೇ ಬೆಳೆಸಿದ್ದ ಬಿಜೆಪಿ ಮೈಂಡ್‌ಸೆಟ್ ಚೇಂಜ್ ಮಾಡಲು ಆಗಿಲ್ಲ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ನಮ್ಮ ಒಳಹೊಡೆತ ಕೆಲಸ ಆಗಿಲ್ಲ. ಏನಾಯ್ತು ಅಂತಾ ಬೂತ್ ವೈಸ್ ಪರಿಶೀಲನೆ ಮಾಡುತ್ತೇನೆ. ಕೆಲವೇ ವ್ಯಕ್ತಿಗಳ ಕುತಂತ್ರದಿಂದ ಇದೆಲ್ಲಾ ಆಗುತ್ತಿದೆ.

ಮುಂದೆ ಲೋಕಸಭಾ ಚುನಾವಣೆ ಬರುತ್ತಿದೆ, ಇದರ ಪರಿಣಾಮ ದೇಶಾದ್ಯಂತ ಆಗುತ್ತೆ. ಲಿಂಗಾಯತ ಬೆಲ್ಟ್ ಮೇಲೆ ಇಂಪ್ಯಾಕ್ಟ್ ಆಗಿದ್ದು, ಲಿಂಗಾಯತರು ಕಾಂಗ್ರೆಸ್ ಪರ ನಿಂತಿದ್ದು ಗೆಲುವಿಗೆ ಒಂದು ಕಾರಣ. ಹುಬ್ಬಳ್ಳಿಯಲ್ಲಿ ಬಿಜೆಪಿ ಒತ್ತಡ ತಂತ್ರ ಹೇರಿ, ಭಯದ ವಾತಾವರಣ ಹೇರಿದ್ದರು. ಹಣ ಹಂಚಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅಧಿಕಾರದ ದುರುಪಯೋಗ, ದೌರ್ಜನ್ಯವಾಗಿದೆ. ಮೋದಿ ನಾಯಕತ್ವ, ಬಿಜೆಪಿ ಸರ್ಕಾರವಿದ್ದಾಗಲೂ 65ಕ್ಕೆ ಬಂದು ನಿಂತಿದ್ದಾರೆ.

ನಾನೆಂದೂ ಸೇಡಿನ ರಾಜಕೀಯ ಮಾಡಿಲ್ಲ. ಬಿಜೆಪಿಯ ಅಹಂಕಾರ, ಹಣದ ಮದಕ್ಕೆ ಉತ್ತರ ಕೊಟ್ಟಿದ್ದೇನೆ. ನನಗೆ ಲಾಭವಾಗಿಲ್ಲ, ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಲೋಕಸಭಾ ಚುನಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಕುಳಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

Sneha Gowda

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

1 hour ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

1 hour ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

1 hour ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

2 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

2 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

3 hours ago