ಮತ್ತೊಮ್ಮೆ ಬಿಜೆಪಿ ಬಹುಮತ ಸರ್ಕಾರವಾಗಿ ಬರಲಿದೆ- ನಳೀನ್ ಕುಮಾರ್  ಕಟೀಲ್

ಹುಬ್ಬಳ್ಳಿ: ಇಡೀ ರಾಜ್ಯದಲ್ಲಿ ಕೇಂದ್ರ ನಾಯಕರು, ರಾಜ್ಯ ನಾಯಕರು ಪ್ರಚಾರ ಮಾಡ್ತಿದ್ದಾರೆ. ಅಭಿಯಾನ ಪ್ರಚಾರ ಯಶಸ್ವಿಯಾಗಿದೆ. ಬೊಮ್ಮಾಯಿ, ಯಡಿಯೂರಪ್ಪ ಮಾರ್ಗದರ್ಶನದ ನೇತೃತ್ವದಲ್ಲಿ ಮತ್ತೊಮ್ಮೆ ಬಹುಮತ ಸರ್ಕಾರ ಬರಲಿದೆ. ನಮ್ಮದು ಕಾರ್ಯಕರ್ತರ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 75 ಹೊಸ ಮುಖಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಲಾಗಿದೆ. ಹತ್ತಾರು ವರ್ಷ ಕೆಲಸ ಮಾಡಿದ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ಮತ್ತು ಹುಬ್ಬಳ್ಳಿ ಅಂತಹ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡಲಾಗಿದೆ. ಡಬಲ್ ಇಂಜಿನ್ ಸರ್ಕಾರ ಯೋಜನೆ ಜನರಿಗೆ ತಲುಪಿವೆ. ಜನರ ಅಭಿಪ್ರಾಯ ಬಿಜೆಪಿ ಪರ ಇದೆ. ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಅನೇಕ ಯೋಜನೆ ಜಾರಿ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಜಾತಿ ಹೆಸರಲ್ಲಿ ರಾಜಕಾರಣ ‌ಮಾಡ್ತಿದೆ. ಮೀಸಲಾತಿ ನೀಡಿರುವುದು ಇದು ಜನಮಾನಸದಲ್ಲಿ ಉಳದಿದೆ. ಎಲ್ಲಾ ಸಮುದಾಯಕ್ಕೆ ಬಿಜೆಪಿ ಸಮಾನತೆಯನ್ನು ಕೊಟ್ಟಿದೆ. ದೇವಸ್ಥಾನ, ಚರ್ಚ ತೆರೆವು ಮಾಡುವಾಗ ಮಾತನಾಡದ ಕಾಂಗ್ರೆಸ್ ಸರ್ಕಾರ ದರ್ಗಾ ತೆರೆವು ಮಾಡಿದ್ದಾಗ ಮಾತನಾಡಿದೆ. ರಸ್ತೆ ಅಗಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ತಡೆಯೊಡ್ಡಿದೆ. ನಮ್ಮ ಸರ್ಕಾರದ ಸಾಧನೆ ಅಭಿವೃದ್ಧಿ ಮುಖಾಂತರ ಜನರ ಬಳಿ ಹೋಗುತ್ತಾ ಇದ್ದೇವೆ.

ರಾಜ್ಯದಲ್ಲಿ ಬಿಜೆಪಿ ನಾಯಕರ ಪ್ರವಾಸ ಯಾರು ಕಂಡರಿಯದ ಸ್ವಾಗತ ಮಾಡಿದ್ದಾರೆ. ಹಳೆ ಮೈಸೂರು ನಲ್ಲಿ ನಮ್ಮ ನಿರೀಕ್ಷೆ ಮೀರಿ ಜನಸಾಗರ ಸೇರಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಲಗ್ಗೆ ಹಾಕಿದೆ. ಮೋದಿ ಸರ್ಕಾರದ ಕಾರ್ಯಗಳನ್ನು ಜನ ಹೊಗಳುತ್ತಿದ್ದಾರೆ ಎಂದರು.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

4 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

6 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

27 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

37 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

39 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

50 mins ago