ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಇಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ, ರಾಜಾಹುಲಿ ಬಿ.ಎಸ್ ಯಡಿಯೂರಪ್ಪ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.
ಇಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಧಾರವಾಡದ ಶಿವಾಜಿ ಸರ್ಕಲ್ ದಿಂದ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುತ್ತಿದ್ದು, ಜೋಶಿ ಅವರಿಗೆ ಸಾಥ್ ನೀಡಲು ಬಿಎಸ್ ಯಡಿಯೂರಪ್ಪ, ಸಿಟಿ ರವಿ, ಬೈರತಿ ಬಸವರಾಜ ಅವರು ಬಂದಿದ್ದು, ನೂರಾರು ಕಾರ್ಯಕರ್ತರು ಸ್ವಾಗತ ಮಾಡಿಕೊಂಡಿದ್ದಾರೆ. ಇನ್ನು ಹುಬ್ಬಳ್ಳಿಯಿಂದ ರಸ್ತೆ ಮೂಲಕ ಧಾರವಾಡಕ್ಕೆ ತೆರಳಿದರು.