News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಅಹವಾಲು ಸ್ವೀಕರಿಸಿ ಸಾರ್ವಜನಿಕರಿಗೆ ಭರವಸೆ ನೀಡಿದ ಸಿಎಂ

C M Basavaraj Bommai
Photo Credit : News Kannada

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳ್ಳಂಬೆಳಿಗ್ಗೆ ನಿವಾಸಕ್ಕೆ ಆಗಮಿಸಿದ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮೂಲಕ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿಯ ಆದರ್ಶನಗರದಲ್ಲಿರುವ ನಿವಾಸದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಸಿದ ಸಿಎಂ ಕೂಡಲೇ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ. ಅಲ್ಲದೇ ನಾಡಿನ ವಿವಿಧ ಕಡೆಗಳಿಂದ ವಿವಿಧ ಸಮಸ್ಯೆಗಳನ್ನ ಹೊತ್ತು ತಂದಿದ್ದ ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದಾರೆ.

ಇನ್ನೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಸೇರಿದಂತೆ ನಾಡಿನ ಅನೇಕ ಕಡೆಗಳಿಂದ ಜನರು ಮನವಿಗಳನ್ನು ಹೊತ್ತು ಸಿಎಂ ನಿವಾಸಕ್ಕೆ ಆಗಮಿಸಿದ್ದು, ದೇವಸ್ಥಾನ ನಿರ್ಮಾಣಕ್ಕೆ ಅನುದಾನ, ಮನೆ ನಿರ್ಮಾಣಕ್ಕೆ ಅನುದಾನ, ವರ್ಗಾವಣೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಅಲ್ಲದೇ ಕೆಲವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು