ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಹಾವೇರಿಗೆ ಪ್ರಯಾಣ ಬೆಳೆಸುತ್ತಿರುವ ಹಿನ್ನಲೆಯಲ್ಲಿ, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನೀಡಲಾಗಿದೆ.
ಇನ್ನು ಸಿಎಂ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಂತರ ರಸ್ತೆ ಮೂಲಕ ಪ್ರಯಾಣ ಬೆಳೆಸುತ್ತಿದ್ದು, ಈಗಾಗಲೇ ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜಮಾಗೊಂಡಿದ್ದರಿಂದ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.