ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿ ಫಯಾಜ್ಗೆ ಗಲ್ಲು ಶಿಕ್ಷೆಯೇ ಆಗಬೇಕು. ನೇಹಾ ಸಾವಿಗೆ ಸರ್ಕಾರದಿಂದ ನ್ಯಾಯ ಸಿಗಬೇಕು ಎಂದು ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ.
ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ ಎಂದಿದ್ದಾರೆ.
ನೇಹಾ ಹಿರೇಮಠ ಹತ್ಯೆ ಖಂಡಿಸಿ ಇವತ್ತು ಹುಬ್ಬಳ್ಳಿ-ಧಾರವಾಡ ನಗರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಅಂಜುಮನ್ ಸಂಸ್ಥೆಯಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಹುಬ್ಬಳ್ಳಿ ಶಾಹಾಬಜಾರ ಸೇರಿ ಪ್ರಮುಖ ಮಾರ್ಕೆಟ್ಗಳನ್ನು ಬಂದ್ ಮಾಡಲಾಗಿದೆ. ಮುಸ್ಲಿಂ ವ್ಯಾಪಾರಿಗಳಿಂದ ಜಸ್ಟೀಸ್ ಟು ನೇಹಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆರೋಪಿ ಫಯಾಜ್ಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಾಗಿದೆ.