ನೇಹಾ ಕೊಲೆ ಪ್ರಕರಣ; ೧೨೦ ದಿನದಲ್ಲಿ ನ್ಯಾಯ ಕೊಡಿಸುವ ಭರವಸೆ ನೀಡಿದ ಸಿಎಂ

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆಗೆ ೧೨೦ ದಿನಗಳೊಳಗೆ ನ್ಯಾಯ ಕೊಡಿಸುವುದಾಗಿ ಸಿಎಂ ಸಿದ್ದರಾಮಯ್ಯ ನಿರಂಜನ್‌ ಹಿರೇಮಠಗೆ ಭರವಸೆ ನೀಡಿದ್ದಾರೆ.

ನೇಹಾ ಕುಟುಂಬವನ್ನು ಭೇಟಿ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ʼಅವರ ಕುಟುಂಬದೊಂದಿಗೆ ನಾವಿದ್ದೇವೆ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲು ಸೂಚಿಸಿದ್ದೇವೆʼ ಎಂದರು.

ಘಟನೆಯನ್ನು ಖಂಡಿಸಿದ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿರುವ ಕಠಿಣ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ʼಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆʼ ಎಂದು ಆರೋಪಿಸಿದ ಸಿಎಂ, ʼನಾನು ಸಾಂತ್ವನ ಹೇಳಲು ಬಂದಿದ್ದೇನೆ. ರಾಜಕೀಯ ಮಾತನಾಡಲ್ಲ. ಅವರ ಕುಟುಂಬಕ್ಕೆ ರಕ್ಷಣೆ ನೀಡಲು ಸಿದ್ಧ. ಆರೋಪಿಗೆ ಕುಮ್ಮಕ್ಕು ನೀಡಿರುವ ಆ್ಯಂಗಲ್ ನಲ್ಲಿ ತನಿಖೆ ಮಾಡಲು ಸೂಚನೆ ನೀಡಲಾಗಿದೆʼ ಎಂದರು.

ಅಗತ್ಯವಿದ್ದಲ್ಲಿ ನೇಹಾ ಕುಟುಂಬಕ್ಕೆ ರಕ್ಷಣೆ ಒದಗಿಸುತ್ತೇವೆ ಎಂದ ಸಿದ್ದರಾಮಯ್ಯ, ೧೨೦ ದಿನಗಳಲ್ಲಿ ನ್ಯಾಯ ಕೊಡಿಸುತ್ತೇವೆ ಎಂದು ನಿರಂಜನ್ ಹಿರೇಮಠಗೆ ಮಾತುಕೊಟ್ಟಿದ್ದಾರೆ.

Maithri S

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

9 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

17 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

17 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

32 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

38 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

51 mins ago