ಹತ್ಯೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಹುಬ್ಬಳ್ಳಿ: ಬರ್ಬರವಾಗಿ ಹತ್ಯೆಯಾದ ಕಾಲೇಜು ವಿದ್ಯಾರ್ಥಿ ನೇಹಾ ಹಿರೇಮಠ ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿ. ಮನೆಯಲ್ಲಿ ಹಾಕಲಾಗಿದ್ದ ನೇಹಾ ಭಾವಚಿತ್ರಕ್ಕೆ ಸಿಎಂ ಪುಷ್ಪ ನಮನ ಸಲ್ಲಿಸಿದರು. ನಂತರ ನೇಹಾ ತಂದೆ-ತಾಯಿಯಾದ ನಿರಂಜನ ಹಿರೇಮಠ ಹಾಗೂ ಗೀತಾ ಅವರಿಗೆ ಸಿಎಂ ಸಾಂತ್ವನ ಹೇಳಿದರು.

ಮಗಳ ಅಗಲಿಕೆಯ ದುಃಖದಲ್ಲಿದ್ದ ನಿರಂಜನ ಹಿರೇಮಠ ಕೈ ಹಿಡಿದು ಸಿದ್ದರಾಮಯ್ಯ ಸಂತೈಸಿದರು. ಈ ವೇಳೆ ಸಚಿವರಾದ ಸಂತೋಷ್‌ ಲಾಡ್, ಹೆಚ್.ಕೆ.ಪಾಟೀಲ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್.ಹೆಚ್. ಕೋನರೆಡ್ಡಿ ಸಿಎಂ ಜೊತೆ ಇದ್ದರು.

ನಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕು. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಇದೇ ವೇಳೆ ನೇಹಾ ತಂದೆ-ತಾಯಿ, ಸಿಎಂ ಬಳಿ ಕೈಮುಗಿದು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲಾಗಿದೆ.

ಖಂಡಿತವಾಗಿಯೂ ಆರೋಪಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದರು. ಇದು ಅಮಾನವೀಯ ಕೃತ್ಯ. ಇದನ್ನು ಎಂದಿಗೂ ಸಹಿಸಲು ಸಾಧ್ಯವಿಲ್ಲ ಎಂದರು.

Chaitra Kulal

Recent Posts

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

40 seconds ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

12 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

45 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

59 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago