ಲಕ್ಷ ಮೌಲ್ಯದ ಆಭರಣ ಮತ್ತು ನಗದು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿಗಳ ಮೌಲ್ಯದ, ಚಿನ್ನ-ಬೆಳ್ಳಿಯ ಒಡವೆ ಹಾಗೂ ನಗದು ಹಣವನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ, ಸಾರಿಗೆ ಸಂಸ್ಥೆಯ ಚಾಲಕ ಕಂ ಕಂಡಕ್ಟರ್ ರೊಬ್ಬರು ಪ್ರಾಮಾಣಿಕತೆ ಮೆರೆದಿದ್ದು, ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

ಹುಬ್ಬಳ್ಳಿ ಗ್ರಾಮಾಂತರ 1ನೇ ಘಟಕದ ಕೆ ಎ 25 ಎಫ್ 32 81 ಸಂಖ್ಯೆಯ ನಿರ್ವಾಹಕ ರಹಿತ ನಾನ್ ಸ್ಟಾಪ್ ಬಸ್ ಶನಿವಾರ ಬೆಳಿಗ್ಗೆ ಹಾವೇರಿಯಿಂದ ಹುಬ್ಬಳ್ಳಿ ಗೋಕುಲ ರಸ್ತೆ ಬಸ್‌ ನಿಲ್ದಾಣಕ್ಕೆ ಬಂದಿದೆ. ಬಸ್‌ನಿಂದ ಇಳಿಯುವಾಗ ಪ್ರಯಾಣಿಕರೊಬ್ಬರು ಪರ್ಸ್ ಬಿಟ್ಟು ಹೋಗಿದ್ದಾರೆ. ಅದನ್ನು ಬೇರೊಬ್ಬ ಮಹಿಳೆ ತೆಗೆದೆಕೊಳ್ಳುವುದನ್ನು ಗಮನಿಸಿದ ಅದೇ ಬಸ್ಸಿನಲ್ಲಿದ್ದ ಸಂಸ್ಥೆಯ ಸಿಬ್ಬಂದಿಯೊಬ್ಬರು ಪ್ರಶ್ನಿಸಿದ್ದಾರೆ. ಆಗ ಮಹಿಳೆ ಪರ್ಸ್ ಅನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾಳೆ. ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಕಮ್ ನಿರ್ವಾಹಕ ಎಂ.ಎಸ್‌. ಹಬ್ಬದ ಅವರೊಂದಿಗೆ ಪರ್ಸ್‌ ತೆರೆದು ನೋಡಲಾಗಿ ಅದರಲ್ಲಿ 40 ಗ್ರಾಂ ಚಿನ್ನದ ಸರ, 16ಗ್ರಾಂ ಜುಮಿಕಿ, 100 ಗ್ರಾಂ ಬೆಳ್ಳಿಯ ಕಾಲು ಚೈನುಗಳು ಹಾಗೂ 500 ರೂ ನಗದು ಹಣವಿರುವುದು ಕಂಡುಬಂದಿದೆ.

ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಹಾಗೂ ನಿಲ್ದಾಣಾಧಿಕಾರಿ ವಿ.ಎಸ್. ಹಂಚಾಟೆ ರವರ ಸಮಕ್ಷಮದಲ್ಲಿ ವಾರಸುದಾರ ಪ್ರಯಾಣಿಕರಾದ ನಿರ್ಮಲ ಚಂದ್ರಶೇಖರಯ್ಯ ಹಿರೇಮಠ ಎಂಬುವವರಿಗೆ ಒಡವೆ ಹಾಗೂ ನಗದು ಹಣವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

Nisarga K

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

14 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

28 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

40 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

56 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago