ಹುಬ್ಬಳ್ಳಿ-ಧಾರವಾಡ

ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಜೋಶಿ‌ ಆರೋಪ

ಹುಬ್ಬಳ್ಳಿ: ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಕುರಿತ ಪಾರದರ್ಶಕ ತನಿಖೆಗೆ ನಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಯುಪಿಎ ಹೆಸರನ್ನು ಬದಲಾವಣೆ ಮಾಡಿದ್ದು, ಬ್ರ್ಯಾಂಡ್ ಕೆಟ್ಟು ಹೋದ ಸಂದರ್ಭದಲ್ಲಿ ಹೇಗೆ ಅಂಗಡಿ, ಫ್ಯಾಕ್ಟರಿ ಹೆಸರು ಬದಲಾವಣೆ ಮಾಡುತ್ತೇವೆ‌. ಹಾಗೇಯೇ ಕಾಂಗ್ರೆಸ್ ಯುಪಿಐ ಬದಲಾವಣೆ ಇಂಡಿಯಾ ಎಂದು ಬ್ರ್ಯಾಂಡ್ ಬದಲಾವಣೆ ಮಾಡಿದೆ. ಆದರೆ ಪ್ರಾಡಕ್ಟ್ ಮಾತ್ರ ಅದೇ ಇದೆ ಎಂದು ಗೇಲಿ ಮಾಡಿದರು.

ಚಂದ್ರಯಾನದ ಯಶಸ್ಸು ದೇಶದ ವಿಜ್ಞಾನಿ ಹಾಗೂ ಯುವಜನರ ಉತ್ಸಾಹವನ್ನು ಹೆಚ್ಚಿಸಿದೆ. ಸ್ವಾತಂತ್ರ್ಯ ಸಿಕ್ಕ 100 ವರ್ಷದೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದರು.

Ashitha S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago