ಹುಬ್ಬಳ್ಳಿ: ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಪೂರ್ವ ಕ್ಷೇತ್ರದ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಶಾಸಕರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ. ಆರೋಪಿಸಿದ ಪ್ರತಿಭಟನಾಕಾರರು, ಹುಬ್ಬಳ್ಳಿಯ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ಪ್ರಮೋದ್ ಮುತಾಲಿಕ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಬ್ಬಯ್ಯಾನೋ ಅಬ್ದುಲ್ಲಾನೋ ಎಂದು ಕಿಡಿಕಾರಿದ್ದ ಪ್ರಮೋದ್ ಮುತಾಲಿಕ್ ವಿರುದ್ಧ ಶಾಸಕರ ಜಾತಿ ಅವಹೇಳನ ಮಾಡಲಾಗಿದೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಮುತಾಲಿಕ್ ವಿರುದ್ಧ ದಲಿತರ ದೌರ್ಜನ್ಯ ಪ್ರಕರಣ ದಾಖಲಿಸಬೇಕೆಂದು ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.