ಧಾರವಾಡ: ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕರ್ನಾಟಕ ವಿಶ್ವವಿದ್ಯಾಲಯ ಬಂದ್ ಮಾಡಿ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ವಿಶ್ವವಿದ್ಯಾಲಯ ಬಂದ್ ಮಾಡಿ ಕರ್ನಾಟಕ ವಿಶ್ವವಿದ್ಯಾಲಯದ ಶಿಕ್ಷಕರು, ಅತಿಥಿ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿ ಎಚ್ಚರಿಸಿದ್ದಾರೆ. ಕವಿವಿ ಕುಲಪತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿಕ್ಷಕರು, ಅಥಿತಿ ಶಿಕ್ಷಕರು ಹಾಗೂ ಶಿಕ್ಷಕೇತರ ನೌಕರರ, ವಿದ್ಯಾರ್ಥಿಗಳಿಗೆ ಒದಗಿಸುವ ಸೌಲಭ್ಯಗಳನ್ನು ನೀಡಲು ಸರ್ಕಾರ ಅನುದಾನ ನೀಡಿದೆ. ಆಂತರಿಕ ಸಂಪನ್ಮೂಲ ಬಳಸಿಕೊಳ್ಳಲು ಹೇಳುತ್ತಿರುವುದು ಇಡೀ ಕರ್ನಾಟಕ ವಿಶ್ವವಿದ್ಯಾಲಯದ ಆರ್ಥಿಕ ಸಂಕಷ್ಟ ಎದುರಿಸುವಂತೆ ಮಾಡಿದೆ.
ಕೋಟಿ ಕೋಟಿ ಅನುದಾನ ಸರ್ಕಾರ ಬಾಕ ಎಚ್ಚರಿಸಿದ್ದಾರೆ ಕರ್ನಾಟಕ ವಿಶ್ವವಿದ್ಯಾಲಯದ ಪಿಂಚಣಿ, ವೇತನ ಬಾಕಿ, ತಾತ್ಕಾಲಿಕ ಶಿಕ್ಷಕ ಶಿಕ್ಷಕೇತರ ನೇಮಕ, ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ವಿದ್ಯಾರ್ಥಿ ವೇತನ ಸೇರಿದಂತೆ ಇನ್ನೂ ಹಲವು ಸಮಸ್ಯೆ ತಲೆದೋರಿದೆ. ಈಗ ಎಲ್ಲ ಕರ್ನಾಟಕ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ವಿಶ್ವ ವಿದ್ಯಾಲಯ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಬಂದ್ ಕರೆ ನೀಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.