ಧಾರವಾಡ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆದ ಪರೀಕ್ಷೆಗಳಲ್ಲಿ ಅಕ್ರಮ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆ ಗೌರವ ಜಿಲ್ಲಾಧ್ಯಕ್ಷ ಲಕ್ಷ್ಮಣ ದೊಡ್ಡಮನಿ ಆಗ್ರಹಿಸಿದರು.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳಿಂದ ಕಷ್ಟಪಟ್ಟು ಓದಿ ಪರಿಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಅಕ್ರಮ ಎಸಗಿರುವ ಎಲ್ಲರಿಗೂ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳು ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಪಿ ಎಸ್ ಐ ಪರಿಕ್ಷೆ ಹಾಗೂ ಕೆಇಟಿ ನಡೆಸಿದ ಪರಿಕ್ಷೆ ಅಕ್ರಮದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸುದೀರ ಮುಧೋಳ, ಪರಶುರಾಮ ದೊಡ್ಡಮನಿ ಸೇರಿದಂತೆ ಹಲವರು ಇದ್ದರು.