News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಸಂವಿಧಾನ ಶಿಲ್ಪಿ ಕುರಿತು ಅವಹೇಳನಕಾರಿ ಸಂದೇಶ: ಚಿಕ್ಕಗುಂಜಳ ಗ್ರಾಮದಲ್ಲಿ ಪ್ರತಿಭಟನೆ

Derogatory message on architect of Constitution scares protest in Chikkagunjala village
Photo Credit : News Kannada

ಧಾರವಾಡ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದರಿಂದ ಕುಂದಗೋಳ ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡು ಕೆಲಕಾಲ ಸಂಘಟನೆಯವರು ಪ್ರತಿಭಟಿಸಿದ ಘಟನೆ ನಡೆದಿದೆ.

ಸಾಮಾಜಿಕ ಜಾಲತಾಣವಾದ ಇನ್ನಾ ಗ್ರಾಂನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕುರಿತು ಚಿಕ್ಕಗುಂಜಳ ಗ್ರಾಮದ ಯುವಕ ಬಸನಗೌಡ ಮಂಜುನಾಥಗೌಡ ನೇಗಳೂರು ಎಂಬಾತ ಅವಹೇಳನಕಾರಿ ಸಂದೇಶವನ್ನು ಹಾಕಿದ್ದರಿಂದ ಆಕ್ರೋಶಿತರಾದ ಡಾ.ಬಿ.ಆರ್.ಅಂಬೇಡ್ಕರ್ ಸಂಘಟನೆಕಾರರು ಪ್ರತಿಭಟನೆ ನಡೆಸಿ ಅವಹೇಳನಕಾರಿ ಸಂದೇಶ ಹಾಕಿದ ಯುವಕನಿಗೆ ಕಾನೂನು ಕ್ರಮಕ್ಕೆ ಆಗ್ರಹ ಪಡಿಸಿದ್ದಾರೆ.

ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಗುಡಗೇರಿ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದ ಪ್ರತಿಭಟನಾಕಾರರು ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕನಿಗೆ ಕಾನೂನು ಕ್ರಮ ಕೈಗೊಳ್ಳುವಂತೆ ಚಿಕ್ಕಗುಂಜಳ ಗ್ರಾಮದ ಉಡಚಪ್ಪ ಸಣ್ಣನಿಂಗಪ್ಪ ಪರಸಣ್ಣವರ ಗುಡಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಗುಡಗೇರಿ ಪೊಲೀಸರು ಯುವಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು