ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಧಾರವಾಡ ಕುವರನ ’ಚಿನ್ನ’ದ ಸಾಧನೆ

ಹುಬ್ಬಳ್ಳಿ : ಜರ್ಮನಿಯ ಬರ್ಲಿನ್‌ನಲ್ಲಿ ಜುಲೈ 28ರಿಂದ ಆಗಸ್ಟ್ 5ರವರೆಗೆ ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾರತ ತಂಡ 20 ಚಿನ್ನದ ಪದಕಗಳೊಂದಿಗೆ ಅಭೂತಪೂರ್ವ ಸಾಧನೆ ಮಾಡಿ ಸ್ವದೇಶಕ್ಕೆ ಮರಳಿದೆ.

ಅಲ್ಲದೇ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪದ ದೇವಪ್ಪ ಮೋರೆ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡಿದ್ದು ಸ್ವಗ್ರಾಮಕ್ಕೆ ಆಗಮಿಸಿದ ಅವರನ್ನು ಗ್ರಾಮಸ್ಥರು ಹೆಗಲ ಮೆಲೆ ಹೊತ್ತೊಯ್ದು ಸ್ವಾಗತಿಸಿದರಲ್ಲದೇ ಭಾರತದ ತ್ರಿವರ್ಣ ಧ್ವಜವನ್ನು ಜರ್ಮನಿಯ ನೆಲದಲ್ಲಿ ಹಾರಿಸಿದ ತಮ್ಮೂರಿನ ಸಾಧಕನ ಸಾಧನೆಗೆ ಸಂಭ್ರಮಿಸಿದರು.

ಭಾರತ ಕುಬ್ಜರ ತಂಡದ ತರಬೇತುದಾರರು ಹಾಗೂ ಮ್ಯಾನೇಜರ್ ಆಗಿದ್ದ ಹುಬ್ಬಳ್ಳಿಯ ಶಿವಾನಂದ ಗುಂಜಾಳ ಅವರನ್ನು ಹೃತ್ಪೂರ್ವಕವಾಗಿ ಬರಮಾಡಿಕೊಂಡರುದೇಶ ಪ್ರತಿನಿಧಿಸುತ್ತಿದ್ದರೂ ಭಾರತ ಸರ್ಕಾರದಿಂದ ಯಾವುದೇ ಅನುದಾನವೂ ಬಂದಿಲ್ಲವಾದ್ದರಿಂದ ಹಲವು ದಾನಿಗಳ ನೆರವಿನಿಂದ ದೇವಪ್ಪ ಇತ್ತೀಚೆಗೆ ಜರ್ಮನಿಯ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.

ಭಾರತ ತಂಡ 20 ಬಂಗಾರ ಅಲ್ಲದೇ 12 ಬೆಳ್ಳಿ,ಹಾಗೂ 10 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. 19 ಜನರ ಭಾರತ ತಂಡದಲ್ಲಿ ದೇವಪ್ಪ ಮೋರೆ ಸಹಿತ 8 ಜನರು ಕನ್ನಡಿಗರೇ ಇದ್ದರು. ರಾಜ್ಯದ ತುಳಸೀದರ 75 ಕೆ.ಜಿ.ಪವರ್ ಲಿಪ್ಟಿಂಗ್ ವಿಭಾಗದಲ್ಲಿ ಬಂಗಾರ ಗೆದ್ದರೆ,ನಾಗೇಶ ಸಹ ಬೆಳ್ಳಿ ಗೆದ್ದಿದ್ದರು. ವಿದೇಶಿ ನೆಲದಲ್ಲಿ ಅಪೂರ್ವ ಸಾಧನೆ ಮಾಡಿರುವ ಕುಬ್ಜ ಕ್ರೀಡಾಪಟುಗಳನ್ನು ಸರ್ಕಾರ ಮತ್ತು ಜಿಲ್ಲಾ ಆಡಳಿತ ಸನ್ಮಾನಿಸಿ ಗೌರವಿಸಬೇಕಾಗಿದೆ. ಅಲ್ಲದೇ ನೆರವಿನ ಹಸ್ತ ನೀಡಬೇಕಾಗಿದೆ.

Sneha Gowda

Recent Posts

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

16 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

43 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

1 hour ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

1 hour ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

2 hours ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

2 hours ago