News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಅಭಿವೃದ್ಧಿಗೆ ಇಲಾಖೆಗಳ ಆದಾಯವು ಮುಖ್ಯವಾಗಿದೆ – ಶಾಸಕ ಅರವಿಂದ ಬೆಲ್ಲದ

Revenue of departments is important for development - MLA Aravind Bellada
Photo Credit : News Kannada

ಧಾರವಾಡ: ಸರ್ಕಾರಗಳು ಜಾರಿಗೊಳಿಸುವ ಜನಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ವಿವಿಧ ಅನುದಾನಗಳ ಜೊತೆಗೆ ವಿವಿಧ ಸರ್ಕಾರಿ ಇಲಾಖೆಗಳು ಸಂಗ್ರಹಿಸುವ ತೆರೆಗೆ, ಸ್ಟ್ಯಾಂಪ್ ಡ್ಯೂಟಿ ಹಣ ಮುಖ್ಯವಾಗಿರುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು.

ಅವರು ಇಂದು ಮಧ್ಯಾಹ್ನ ಲಕಮನಹಳ್ಳಿ ಪ್ರದೇಶದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನೂತನ ಕಛೇರಿ ಕಟ್ಟಡ ಖನಿಜ ಭವನ ಉದ್ಘಾಟಿಸಿ, ಮಾತನಾಡಿದರು.

ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸರ್ಕಾರ ಅನುದಾನ ನೀಡುತ್ತದೆ, ಸರ್ಕಾರಕ್ಕೆ ಜಿ.ಎಸ್.ಟಿ. ಅಬಕಾರಿ ಇಲಾಖೆ, ಮೋಟಾರ್ ವಾಹನ ಇಲಾಖೆ, ಸ್ಟ್ಯಾಂಪ್ ಡ್ಯೂಟಿ, ಗಣಿ ಇಲಾಖೆ, ಕೈಗಾರಿಕೆ ಇಲಾಖೆ ಅಂತಹ ಪ್ರಮುಖ ಇಲಾಖೆಗಳಿಂದ ಆದಾಯ ಬರುತ್ತದೆ ಎಂದು ಶಾಸಕರು ತಿಳಿಸಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಸರ್ಕಾರದ ಮುಖ್ಯ ಇಲಾಖೆ ಆಗಿದ್ದು, ಜಿಲ್ಲೆ ಮತ್ತು ರಾಜ್ಯದ ಅಭಿವೃದ್ಧಿಗೆ, ಕಾಮಗಾರಿಗಳಿಗೆ ಅನುದಾನ ಸಂಗ್ರಹಿಸುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಅಧ್ಯಕ್ಷ ರಾಜೇಶ್ ಕೋಟೆನ್ನವರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೆ.ಚಂದ್ರಶೇಖರ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಧಾರವಾಡ ವಿಭಾಗದ ಕೆ.ಆರ್.ಐ.ಡಿ.ಎಲ್. ಕಾರ್ಯಪಾಲಕ ಅಭಿಯಂತರರಾದ ಸುಜಾತ ಎಸ್.ಕಾಳೆ ಅವರು ವಂದಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು