News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಚುನಾವಣೆ‌ ಹಿನ್ನಲೆ ಎರಡು ದಿನ ಮದ್ಯ ಮಾರಾಟ ನಿಷೇಧ

Sale of liquor banned for two days in view of elections
Photo Credit : Pixabay

ಧಾರವಾಡ: ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಜರುಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎರಡು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 8ರಂದು ಸಂಜೆ 5 ಗಂಟೆಯಿಂದ ಮೇ 11ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಲಾಗಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದ್ದು, ಆ ದಿನ ಬೆಳಿಗ್ಗೆ 6 ಗಂಟೆಯಿಂದ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು