ಧಾರವಾಡ: ಜೂನ್ 29ರಂದು ಜಿಲ್ಲೆಯಾದ್ಯಂತ ಆಚರಿಸಲಾಗುವ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತಂತೆ ಅನಧಿಕೃತವಾಗಿ ಗೋವು, ಕರುಗಳು, ಒಂಟೆಗಳು ಮತ್ತು ಇತರೆ ಜಾನುವಾರುಗಳ ಅಕ್ರಮ ಸಾಗಾಣಿಕೆ, ವಧೆ ಮಾಡುವುದನ್ನು ತಡೆಯುವ ಕುರಿತು ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಸರ್ಕಾರದ ಆದೇಶಗಳ ಅನುಸಾರ ಚರ್ಚಿಸಿ ಗೋವು, ಕರುಗಳು, ಒಂಟೆಗಳು ಮತ್ತು ಇತರೆ ಜಾನುವಾರುಗಳ ಅಕ್ರಮ ಸಾಗಾಣಿಕೆ , ವಧೆ ಮಾಡುವುದನ್ನು ನಿಷೇಧಿಸಲಾಗಿದೆ.
ಪ್ರಾಣಿಗಳ ಮೇಲೆ ಕ್ರೌರ್ಯ ತಡೆ ಕಾಯ್ದೆ, 1960ರ ಅಡಿಯಲ್ಲಿ ಯಾವುದೇ ಪ್ರಾಣಿಯ ಮೇಲೆ ಕ್ರೌರ್ಯ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಈ ಕಾಯ್ದೆಯ ಆರ್ಟಿಕಲ್ ಸಂಖ್ಯೆ-48, 48(ಎ) ಮತ್ತು 51 ಎ(ಜಿ) ರ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಧಾರವಾಡ ಜಿಲ್ಲಾ ಪ್ರಾಣಿದಯಾ ಸಂಘದ ಪದನಿಮಿತ್ತ ಸದಸ್ಯ ಕಾರ್ಯದರ್ಶಿಗಳು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.