ಹುಬ್ಬಳ್ಳಿ-ಧಾರವಾಡ

ಧಾರವಾಡ: ಅವಳಿನಗರದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅವಳಿ ನಗರ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಅನಧಿಕೃತ ಲೇಔಟ್‍ಗಳ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.

ಹುಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ. ಸಂತೋಷ್ ಕುಮಾರ್ ಬಿರಾದಾರ ಅವರು ಅನಧಿಕೃತ ಬಡಾವಣೆಗಳ ಸಮೀಕ್ಷೆ ಕೈಗೊಂಡಿದ್ದು, ಹಂತ ಹಂತವಾಗಿ ಅವುಗಳ ತೆರವು ಕಾರ್ಯಾಚರಣೆಯನ್ನು ಈಗಾಗಲೇ ಆರಂಭಿಸಿದ್ದಾರೆ.

ಹುಬ್ಬಳ್ಳಿ ತಾಲೂಕಿನ ತಿಮ್ಮಸಾಗರ ಗ್ರಾಮ ವ್ಯಾಪ್ತಿಯ 5 ಎಕರೆ 28 ಗುಂಟೆ ಹಾಗೂ 1 ಎಕರೆ 6 ಗುಂಟೆ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಲೇಔಟ್‍ನ್ನು ತೆರವುಗೊಳಿಸಲಾಯಿತು. ಈಗಾಗಲೇ ಸಮೀಕ್ಷೆಯಲ್ಲಿ ಗುರುತಿಸಿರುವ ಅನಧಿಕೃತ ಲೇಔಟ್‍ಗಳ ತೆರವು ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲೂ ಮುಂದುವರೆಸಲಾಗುವುದು. ಸಾರ್ವಜನಿಕರು ಅನುಮತಿ ಇಲ್ಲದೆ ನಿರ್ಮಿಸುವ ಅನಧಿಕೃತ ಲೇಔಟ್‍ಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಮತ್ತು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅಗತ್ಯ ಅನುಮತಿ ಪಡೆಯದೇ ನಿರ್ಮಿಸುವ ಲೇಔಟ್‍ಗಳಲ್ಲಿ ಸಾರ್ವಜನಿಕರು ಸೈಟ್‍ಗಳನ್ನು ಖರೀದಿಸಬಾರದೆಂದು ಹುಡಾ ಆಯುಕ್ತ ಡಾ. ಸಂತೋಷ್ ಕುಮಾರ್ ಬಿರಾದಾರ ತಿಳಿಸಿದ್ದಾರೆ.

Gayathri SG

Recent Posts

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

15 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

31 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago