ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಯಾಗಿ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ದಿವ್ಯ ಪ್ರಭು ಅವರಿಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.
ಈ ಮೊದಲು ಸ್ವಾಮೀಜಿ, ತಮ್ಮ ಬೆಂಬಲಿಗರೊಂದಿಗೆ ಧಾರವಾಡದ ಆರ್. ಎಲ್. ಎಸ್. ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.