News Karnataka Kannada
Tuesday, April 16 2024
Cricket
ಹುಬ್ಬಳ್ಳಿ-ಧಾರವಾಡ

ಜು.21ರಿಂದ 22ರವರೆಗೆ ಜಿಲ್ಲೆಯಲ್ಲಿ ಮಳೆಗೆ ಹಾನಿಯಾದ ಮನೆಗಳ ಸಂಖ್ಯೆ ಎಷ್ಟು ಗೊತ್ತಾ !

Do you know the number of houses damaged in the rains in the district from July 21 to 22?
Photo Credit : News Kannada

ಧಾರವಾಡ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 21 ರಿಂದ ಜುಲೈ 22 ರ ಬೆಳಿಗ್ಗೆ 8 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿನ ಸುಮಾರು 30 ಮನೆಗಳಿಗೆ ಹಾನಿ ಆಗಿದ್ದು, ಗೊಡೆ ಕುಸಿದು 5 ಕುರಿಮರಿಗಳ ಜೀವ ಹಾನಿ ಆಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ನಿರಂತರ ಮಳೆಯಿಂದಾಗಿ ಧಾರವಾಡ ತಾಲೂಕಿನಲ್ಲಿ 13, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 3, ಅಳ್ನಾವರ ತಾಲೂಕಿನಲ್ಲಿ 3, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ 1 ತೀವ್ರತರ ಮತ್ತು 1 ಭಾಗಶಃ ಸೇರಿ ಒಟ್ಟು 2, ಕುಂದಗೋಳ ತಾಲೂಕಿನಲ್ಲಿ 2 ಮತ್ತು ಕಲಘಟಗಿ ತಾಲೂಕಿನಲ್ಲಿ 2 ತೀವ್ರತರ ಹಾಗೂ 5 ಭಾಗಶಃ ಸೇರಿದಂತೆ ಒಟ್ಟು 7 ಮನೆಗಳು ಒಳಗೊಂಡಂತೆ ಜಿಲ್ಲೆಯ ಆರು ತಾಲೂಕುಗಳಲ್ಲಿ 30 ಮನೆಗಳು ಭಾಗಶಃ ಹಾನಿಯಾದ ವರದಿ ಆಗಿದೆ.

ನಿನ್ನೆ ರಾತ್ರಿ ನಿರಂತರ ಮಳೆ ಆಗಿದ್ದರಿಂದ ಹುಬ್ಬಳ್ಳಿ ತಾಲೂಕಿನ ಕಟ್ನೂರು ಗ್ರಾಮದ ಶಿವನಗೌಡ ಹೊಳೆಪ್ಪಗೌಡ ಪಾಟೀಲ ಇವರ ಮನೆ ಗೋಡೆ ಕುಸಿದು, ಅವರ 5 ಕುರಿ ಮರಿಗಳ ಜೀವ ಹಾನಿ ಆಗಿದೆ.

ಈ ಎಲ್ಲ ಪ್ರಕರಣಗಳ ಕುರಿತು ಗ್ರಾಮ ಅಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ತಹಸಿಲ್ದಾರರಿಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ತನಿಖಾ ತಂಡದಿಂದ ಪರಿಶೀಲನೆ ಕಾರ್ಯ ಜರುಗಿಸಿ, ಅರ್ಹ ಫಲಾನುಭವಿಗಳಿಗೆ ಪರಿಹಾರ ವಿತರಿಸುವಲ್ಲಿ ಸರ್ಕಾರದ ನಿಯಮಾವಳಿಗಳಂತೆ ನಿಯಮಾನುಸಾರ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು