News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ

ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.
Photo Credit : NewsKarnataka

ಧಾರವಾಡ :  ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಸರ್ವರಿಗೂ, ಮಹಾನ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯ ಶುಭಾಶಯ ಕೋರಿದರು.

ಬುದ್ದ ರಕ್ಕಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಣೆ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭಾ ಅವರು ಸ್ವಾಗತಿಸಿ, ವಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಜಿಲ್ಲಾ ನಗರಾಭಿವೃದ್ದೀಕೋಶದ ಯೋಜನಾ ನಿರ್ದೇಶಕ ರಮೇಶ ಬಿ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾವತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಮಾಜದ ಮುಖಂಡರಾದ ಸುಶೀಲಮ್ಮಾ ಚಲವಾದಿ, ಮಾಲಾ ತುರಿಹಾಳ್ , ಕಲ್ಮೇಶ ಹಾದಿಮನಿ , ಅಶೋಕ್ ದೊಡ್ಡಮನಿ ಸೇರಿದಂತೆ ಇತರ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ:ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಇಂದು ಬೆಳಿಗ್ಗೆ ಕಲಾಭವನ ಎದುರಿಗೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ನೇತೃತ್ವದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು, ಸಮಾಜ ಮುಖಂಡರು, ಸಾರ್ವಜನಿಕರು ಮಾಲಾರ್ಪಣೆ ಮಾಡಿ, ವಂದಿಸಿದರು.
ಮತ್ತು ನಂತರ ಅವರು ಕಲಾಭವನ ಆವರಣದಲ್ಲಿರುವ ಶ್ರೀ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು