News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಬೆಂಗಳೂರಿನ ವಿವಿಧ ಶಾಲೆಗಳಿಗೆ ಈ-ಮೇಲ್ ಬಂದಿದ್ದು ಖಂಡನೀಯ : ಮುತಾಲಿಕ್‌

ಶ್ರೀರಾಮ ಮಂದಿರ ಉದ್ಘಾಟನೆ ಆಮಂತ್ರಣ ಕಾಂಗ್ರೆಸ್ ಪಕ್ಷದಿಂದ ತಿರಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ  ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಾಂಗ್ರೆಸ್  ಪಕ್ಷ ರಾಮಮಂದಿರ  ಉದ್ಘಾಟನೆಯ ಆಮಂತ್ರಣವನ್ನು ತಿರಸ್ಕಾರ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು  ಹೇಳಿದ್ದಾರೆ.
Photo Credit : News Kannada

ಧಾರವಾಡ : ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎನ್ನುವುದರ ಜೊತೆಗೆ ಬಾಂಬ್ ಬೆದರಿಕೆ ಹಾಕಿ ಬೆಂಗಳೂರಿನ ವಿವಿಧ ಶಾಲೆಗಳಿಗೆ ಈ-ಮೇಲ್ ಬಂದ ವಿಚಾರವಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿ, ಬೆಂಗಳೂರಿನ 17 ಶಾಲೆಗಳಿಗೆ ಈ ರೀತಿ ಈ-ಮೇಲ್ ಹಾಕಲಾಗಿದೆ. ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಮುಂದಾಗಿ ಎಂಬ ಸಂದೇಶ ಕಳುಹಿಸಲಾಗಿದೆ. ಇಡಿ ಹಿಂದೂಗಳಿಗೆ ಇವರು ಈ ರೀತಿಯ ಆಹ್ವಾನ ನೀಡಿದ್ದಾರೆ. ಈ ದೇಶವನ್ನು ಇಸ್ಲಾಂ ಮಾಡುತ್ತೇವೆ, ಖಡ್ಗದ ಆಧಾರದ ಮೇಲೆ ಮತಾಂತರ ಮಾಡುತ್ತೇವೆ ಎಂದಿದ್ದಾರೆ. ಮುಜಾಹಿದ್ದೀನ್ ಎಂಬ ಹಿಂದೂ ವಿರೋಧಿಯಿಂದ ಈ ರೀತಿಯ ಮೇಲ್ ಬಂದಿದೆ ಎಂದಿದ್ದಾರೆ.

ಇದು ಬಹು ದೊಡ್ಡ ಆತಂಕದ ಸಂಗತಿ. ಇದಕ್ಕೆ ಕಾಂಗ್ರೆಸ್‌ ಸರ್ಕಾರ ಕಾರಣ. ಕಾಂಗ್ರೆಸ್‌ನ ತುಷ್ಟಿಕರಣ ಪರಿಣಾಮದಿಂದ ಮುಸ್ಲಿಂರು ನಮ್ಮದೇ ರಾಜ್ಯ ಎನ್ನುವ ಭ್ರಮೆಯಲ್ಲಿದ್ದಾರೆ. ಶಾಲಾ, ಕಾಲೇಜುಗಳಿಗೆ ಬೆದರಿಕೆ ಬರುತ್ತಿರುವುದು ಗಂಭೀರ ವಿಚಾರ. ಜನರು ತಮ್ಮ ಸುರಕ್ಷತೆ ಬಗ್ಗೆ ವಿಚಾರ ಮಾಡಬೇಕು. ಈ ಮೇಲ್ ಎಲ್ಲಿಂದ ಯಾರಿಗೆ ಬಂದಿದೆ ಎಂಬುದನ್ನು ಪತ್ತೆ ಮಾಡಬೇಕು. ಇದೊಂದು ಭಯೋತ್ಪಾದನೆಗೆ ಸಂಬಂಧಪಟ್ಟಿದ್ದು. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಘಟನೆಗಳು ಆಗುವ ಬಗ್ಗೆ ಮೇಲ್‌ನಲ್ಲಿ ಸೂಚನೆ ಇದೆ. ಸರ್ಕಾರ ಇಂತವರನ್ನು ಹದ್ದು ಬಸ್ತಿನಲ್ಲಿ ಇಡಬೇಕು. ಇವರನ್ನು ಒದ್ದು ಒಳಗೆ ಹಾಕಬೇಕು. ಮೂರ್ತಿ ಉಪಾಸಕರನ್ನು ಕೊಲ್ಲಬೇಕು ಎಂದು ಕುರಾನ್‌ನಲ್ಲಿ ಬರೆಯಲಾಗಿದೆ. ಇದಕ್ಕೆ ಪುಷ್ಠಿಯಾಗಿ ಈ ಮೇಲ್ ಬಂದಿದೆ. ಇದನ್ನು ನಾನು ವಿರೋಧಿಸುತ್ತೇನೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು