ಬೆಂಗಳೂರಿನ ವಿವಿಧ ಶಾಲೆಗಳಿಗೆ ಈ-ಮೇಲ್ ಬಂದಿದ್ದು ಖಂಡನೀಯ : ಮುತಾಲಿಕ್‌

ಧಾರವಾಡ : ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎನ್ನುವುದರ ಜೊತೆಗೆ ಬಾಂಬ್ ಬೆದರಿಕೆ ಹಾಕಿ ಬೆಂಗಳೂರಿನ ವಿವಿಧ ಶಾಲೆಗಳಿಗೆ ಈ-ಮೇಲ್ ಬಂದ ವಿಚಾರವಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿ, ಬೆಂಗಳೂರಿನ 17 ಶಾಲೆಗಳಿಗೆ ಈ ರೀತಿ ಈ-ಮೇಲ್ ಹಾಕಲಾಗಿದೆ. ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಮುಂದಾಗಿ ಎಂಬ ಸಂದೇಶ ಕಳುಹಿಸಲಾಗಿದೆ. ಇಡಿ ಹಿಂದೂಗಳಿಗೆ ಇವರು ಈ ರೀತಿಯ ಆಹ್ವಾನ ನೀಡಿದ್ದಾರೆ. ಈ ದೇಶವನ್ನು ಇಸ್ಲಾಂ ಮಾಡುತ್ತೇವೆ, ಖಡ್ಗದ ಆಧಾರದ ಮೇಲೆ ಮತಾಂತರ ಮಾಡುತ್ತೇವೆ ಎಂದಿದ್ದಾರೆ. ಮುಜಾಹಿದ್ದೀನ್ ಎಂಬ ಹಿಂದೂ ವಿರೋಧಿಯಿಂದ ಈ ರೀತಿಯ ಮೇಲ್ ಬಂದಿದೆ ಎಂದಿದ್ದಾರೆ.

ಇದು ಬಹು ದೊಡ್ಡ ಆತಂಕದ ಸಂಗತಿ. ಇದಕ್ಕೆ ಕಾಂಗ್ರೆಸ್‌ ಸರ್ಕಾರ ಕಾರಣ. ಕಾಂಗ್ರೆಸ್‌ನ ತುಷ್ಟಿಕರಣ ಪರಿಣಾಮದಿಂದ ಮುಸ್ಲಿಂರು ನಮ್ಮದೇ ರಾಜ್ಯ ಎನ್ನುವ ಭ್ರಮೆಯಲ್ಲಿದ್ದಾರೆ. ಶಾಲಾ, ಕಾಲೇಜುಗಳಿಗೆ ಬೆದರಿಕೆ ಬರುತ್ತಿರುವುದು ಗಂಭೀರ ವಿಚಾರ. ಜನರು ತಮ್ಮ ಸುರಕ್ಷತೆ ಬಗ್ಗೆ ವಿಚಾರ ಮಾಡಬೇಕು. ಈ ಮೇಲ್ ಎಲ್ಲಿಂದ ಯಾರಿಗೆ ಬಂದಿದೆ ಎಂಬುದನ್ನು ಪತ್ತೆ ಮಾಡಬೇಕು. ಇದೊಂದು ಭಯೋತ್ಪಾದನೆಗೆ ಸಂಬಂಧಪಟ್ಟಿದ್ದು. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಘಟನೆಗಳು ಆಗುವ ಬಗ್ಗೆ ಮೇಲ್‌ನಲ್ಲಿ ಸೂಚನೆ ಇದೆ. ಸರ್ಕಾರ ಇಂತವರನ್ನು ಹದ್ದು ಬಸ್ತಿನಲ್ಲಿ ಇಡಬೇಕು. ಇವರನ್ನು ಒದ್ದು ಒಳಗೆ ಹಾಕಬೇಕು. ಮೂರ್ತಿ ಉಪಾಸಕರನ್ನು ಕೊಲ್ಲಬೇಕು ಎಂದು ಕುರಾನ್‌ನಲ್ಲಿ ಬರೆಯಲಾಗಿದೆ. ಇದಕ್ಕೆ ಪುಷ್ಠಿಯಾಗಿ ಈ ಮೇಲ್ ಬಂದಿದೆ. ಇದನ್ನು ನಾನು ವಿರೋಧಿಸುತ್ತೇನೆ ಎಂದಿದ್ದಾರೆ.

Ashika S

Recent Posts

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

5 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

21 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

32 mins ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

8 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

8 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago