ಚುನಾವಣೆ ಕರ್ತವಕ್ಕೆ ಸಕಾರಣವಿಲ್ಲದೆ ವಿನಾಯಿತಿ ಇಲ್ಲ: ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು

ಧಾರವಾಡ: 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗಾಗಿ ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಲು ವಿವಿಧ ಹಂತದ ಸುಮಾರು 10 ಸಾವಿರಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ. ಇದರಲ್ಲಿ ಅರ್ಧಕ್ಕಿಂತ ಹೆಚ್ಚು ಜನರಿಗೆ ಈಗಾಗಲೇ ಆದೇಶ ನೀಡಿ ಮೊದಲ ಹಂತದ ತರಬೇತಿಯು ನಡೆಯುತ್ತಿದೆ. ಆದರೆ ಕೆಲವು ಅಧಿಕಾರಿ, ಸಿಬ್ಬಂದಿಗಳು ಚುನಾವಣಾ ಕರ್ತವ್ಯಕ್ಕೆ ವಿನಾಯಿತಿ ಕೇಳಿ, ಅರ್ಜಿ ಸಲ್ಲಿಸುವದು, ಇತರರಿಂದ ಶಿಪಾರಸ್ಸು ಮಾಡಿಸುವುದು, ಅಪ್ರಸ್ತುತ ಕಾರಣ ಹೇಳುವುದು ಕಂಡುಬರುತ್ತಿದೆ. ಅನಾರೋಗ್ಯ ಅಥವಾ ತೀರಾ ಅನಿವಾರ್ಯವಾದ ಕಾರಣಗಳಿದ್ದಲ್ಲಿ ಅವುಗಳನ್ನು ನಿಯಮಾನುಸಾರ ಪರಿಶೀಲಿಸಲಾಗುವುದು. ಅದಕ್ಕಾಗಿ ಪ್ರತ್ಯೇಕ ಪರಿಶೀಲನಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಚುನಾವಣಾ ನಿಯೋಜಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಕರ್ತವ್ಯಕ್ಕೆ ವಿನಾಯಿತಿ ಕೇಳಿ ಸಲ್ಲಿಸುವ ಅರ್ಜಿಗಳನ್ನು ಕೂಲಂಕೂಷವಾಗಿ ಪರಿಶೀಲಿಸಿ, ಕ್ರಮ ವಹಿಸಲಾಗುವುದು. ಮೆಡಿಕಲ್ ಬೊರ್ಡ್ ಮೂಲಕ ಆರೋಗ್ಯ ಸಂಬಂಧಿತ ಅರ್ಜಿಗಳನ್ನು ಪರಿಶೀಲಿಸಲಾಗುವುದು. ಅರ್ಜಿಯೊಂದಿಗೆ ಅಧಿಕೃತ ದಾಖಲೆ ಸಲ್ಲಿಸಬೇಕು. ಚುನಾವಣಾ ಕರ್ತವ್ಯದಿಂದ ಹೊರಗುಳಿಯಲು ಯಾವುದೇ ಸಿಬ್ಬಂದಿ ಅಥವಾ ಅಧಿಕಾರಿ ಅನಗತ್ಯ ಕಾರಣ, ಅನಧಿಕೃತ ದಾಖಲೆ ಸಲ್ಲಿಸಿದರೆ ಅಥವಾ ಬೇರೆಯವರಿಂದ ಶಿಪಾರಸ್ಸುಗಳನ್ನು ಮಾಡಿಸಿದರೆ ಅಂತವರ ಮೇಲೆ ನಿಗಾ ಇರಿಸಿ, ತಕ್ಷಣ ಜಿಲ್ಲೆಯಿಂದ ಬಿಡುಗಡೆಗೊಳಿಸಿ, ಸೂಕ್ತ ಕ್ರಮಕೈಗೊಳ್ಳಲು ಭಾರತ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಎಚ್ಚರಿಸಿದರು.

ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ, ಆಲಸ್ಯ, ಉದಾಸೀನತೆ ತೊರುವ ಹಾಗೂ ಪಾರದರ್ಶಕವಾಗಿ ಚುನಾವಣಾ ಕೆಲಸ ಮಾಡದವರ ಬಗ್ಗೆ ಕಾಲಕಾಲಕ್ಕೆ ಪರಿಶೀಲಿಸಿ, ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಕ್ರಮಕೈಗೊಳ್ಳಲಾಗುವುದು. ಕರ್ತವ್ಯಕ್ಕೆ ನಿಯೋಜಿತರ ಅರ್ಜಿಗಳು ಸತ್ಯಂಶಗಳಿಂದ ಕೂಡಿದ್ದಲ್ಲಿ ಪರಿಶೀಲಿಸಿ, ನಿಯಮಾನುಸಾರ ಕ್ರಮ ವಹಿಸಲಾಗುವುದು. ಪ್ರತಿ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಕರ್ತವ್ಯ ನಿರ್ವಹಣೆಯು ಕಡ್ಡಾಯವಾಗಿದೆ. ಯಾವುದೇ ನೆಪಗಳನ್ನು ಹೇಳದೆ ತಮಗೆ ವಹಿಸಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವ ಮೂಲಕ ಚುನಾವಣಾ ಕಾರ್ಯ ಯಶಸ್ವಿ ಆಗುವಂತೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

Gayathri SG

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

7 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

17 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

29 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

53 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

53 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago