ಧಾರವಾಡ: ಹು-ಧಾ ಮಹಾನಗರ ಪಾಲಿಕೆಯ 22ನೇ ಅವಧಿಗೆ ವಿವಿಧ 4.ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸುವ ಚುನಾವಣೆಯನ್ನು ಆ.17 ರಂದು ಬೆಳಿಗ್ಗೆ 9 ಗಂಟೆಗೆ ಪಾಲಿಕೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾಭವನದಲ್ಲಿ ಜರುಗಲಿದೆ.
ಹು-ಧಾ ಮಹಾನಗರ ಪಾಲಿಕೆಯ 22ನೇ ಅವಧಿಗೆ ತೆರಿಗೆ ನಿರ್ಧಾರಣಾ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿ ರಚನೆಗೆ ಚುನಾವಣೆ ಜರುಗಲಿದೆ.