ಬಾಲ್ಯವಿವಾಹ ನಡೆದರೆ ದೂರು ದಾಖಲಿಸಿ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಧಾರವಾಡ : ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆದರೆ ಎಫ್‍ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಅವರು ಇಂದು (ಮೇ.31) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ನ್ಯಾಯಾಲಯಕ್ಕೆ ಹೋಗುವ ಪ್ರಕರಣಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವಂತೆ ಸೂಚಿಸಿದರು. ಸ್ವಾಧಾರ ಗೃಹ ಯೋಜನೆ, ಉಜ್ವಲ್, ಪೆÇೀಶನ್ ಅಭಿಯಾನ್ ಹಾಗೂ ರಾಜ್ಯ ಮಹಿಳಾ ನಿಲಯ ಯೋಜನೆಗಳ ಕುರಿತು ಮಾಹಿತಿಯನ್ನು ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು.

ಕಲಘಟಗಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿ ತೀರ ಕಡಿಮೆ ವಿದ್ಯಾರ್ಥಿಗಳಿರುವ ಕಾರಣ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಸರಕಾರಿ ವಸತಿ ನಿಲಯಕ್ಕೆ ವರ್ಗಾಯಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ಕುರಿತು ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು ಮತ್ತು ಬಾಲ್ಯ ವಿವಾಹ ನಡೆದ ಬಾಲಕಿಯ ಮನೆಗೆ ವಾರದಲ್ಲಿ ಒಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಇಲಾಖೆಯ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆದ ಬಾಲ್ಯ ವಿವಾಹದ ಕುರಿತು ಸಂಪೂರ್ಣ ವಿವರವನ್ನು ಸುರಕ್ಷಿಣಿ ವೆಬ್‍ಪೆÇೀರ್ಟ್‍ಲ್‍ನಲ್ಲಿ ಅಳವಡಿಸಿಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಜನೆವರಿಯಿಂದ ಇಲ್ಲಿಯವರೆಗೆ ಲೈಂಗಿಕ ಕಿರುಕುಳ, ಅತ್ಯಾಚಾರ, ಕೌಟುಂಬಿಕ ಕಲಹ ಸೇರಿದಂತೆ ಒಟ್ಟು 64 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಬಸವಲಿಂಗ ಮೂಗನೂರಮಠ, ಸಹಾಯಕ ಪೆÇಲೀಸ್ ಆಯುಕ್ತ ಉಲ್ಲಣ್ಣನವರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

18 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

39 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago