ನೇಹಾ ಹಿರೇಮಠ ಮನೆಗೆ ಮಾಜಿ ಸಿಎಂ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ

ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆ ದಾರಿತಪ್ಪಿದೆ. ರಾಜ್ಯ ಸರ್ಕಾರಕ್ಕೆ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲದಿದ್ದರೆ, ಈಗಲೂ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಇಂದು ನಿರಂಜನ ಹಿರೇಮಠ ಅವರ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ಆರೋಪಿಗೆ ಕಠಿಣ ಶಿಕ್ಷೆ ನೀಡುವ ಕುರಿತು ಭರವಸೆ ನೀಡಿದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠಗೆ ಶ್ರದ್ದಾಂಜಲಿ ಸಲ್ಲಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರಂಜನ್ ಹಿರೇಮಠ ಅವರ ಕುಟುಂಬಕ್ಕೂ ನಮಗೂ ಬಹಳ ಹಳೆಯ ಸಂಬಂಧವಿದೆ. ಕಮಡೊಳ್ಳಿಯಲ್ಲಿ ನಿರಂಜನ ಹಿರಿಯರು ನಮ್ಮ ಕುಟುಂಬದ ಗುರುಗಳು. ನೇಹಾ ಹತ್ಯೆ ಬಹಳ ಆಘಾತದ ಸಂಗತಿ.

ಅಮಾಯಕ ಹೆಣ್ಣು ಮಗುವನ್ನು ಕ್ರೂರವಾಗಿ ಕೊಲೆ ಮಾಡಿರುವುದು ಎಲ್ಲರೂ ತಲೆತಗ್ಗಿಸುವಂತಹ ವಿಚಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

Chaitra Kulal

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

24 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

29 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

42 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

48 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

51 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

1 hour ago