ಧಾರವಾಡ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಇಂದಿನ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ 28,095 ವಿದ್ಯಾರ್ಥಿಗಳು ಹಾಜರಾಗಿದ್ದರು. ಮತ್ತು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 302 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ 7 ತಾಲೂಕುಗಳ 101 ಪರೀಕ್ಷಾ ಕೇಂದ್ರಗಳಲ್ಲಿ ನಿಯಮಾನುಸಾರ ಪರೀಕ್ಷೆ ನಡೆದಿವೆ. ಜಾಗೃತ ದಳದ ಅಧಿಕಾರಿಗಳು ನಕಲು ತಡೆಯಲು ತಪಾಸಣೆ ಕೈಗೊಂಡಿದ್ದಾರೆ.
ಇಂದಿನ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಹುಬ್ಬಳ್ಳಿ ಶಹರದ ಅಂಜುಮನ್ ಉರ್ದು ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಮತ್ತು ಹುಬ್ಬಳ್ಳಿ ಶಹರದ ಡಾ.ಜಿ.ವ್ಹಿ.ಜೋಶಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಒರ್ವ ವಿದ್ಯಾರ್ಥಿ ಹಾಗೂ ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಕುಸುಗಲ್ಲ ಗ್ರಾಮದ ಸರಕಾರಿ ಪ್ರೌಢಶಾಲೆಯ ಒರ್ವ ವಿದ್ಯಾರ್ಥಿ ಸೇರಿ ಒಟ್ಟು ನಾಲ್ಕು ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…