News Karnataka Kannada
Thursday, May 09 2024
ಹುಬ್ಬಳ್ಳಿ-ಧಾರವಾಡ

ಶಕ್ತಿ ಯೋಜನೆ : ಒಂದೇ ದಿನ 1.22 ಲಕ್ಷ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ

free bus journy
Photo Credit : News Kannada

ಹುಬ್ಬಳ್ಳಿ: ರಾಜ್ಯಾದ್ಯಂತ ಆರಂಭವಾಗಿರುವ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರ ಉಚಿತ ಪ್ರಯಾಣದ “ಶಕ್ತಿ ಯೋಜನೆ”ಯ ಮೊದಲ ದಿನ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಸುಗಳಲ್ಲಿ 1.22 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.

ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ರವಿವಾರ ಜೂನ್ 11ರಂದು ಆರಂಭಿಸಲಾಗಿರುವ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿರುತ್ತದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಸಂಸ್ಥೆಯ ವ್ಯಾಪ್ತಿಯ ಧಾರವಾಡ , ಬೆಳಗಾವಿ , ಬಾಗಲಕೋಟೆ, ಗದಗ , ಹಾವೇರಿ ಮತ್ತು ಉತ್ತರ ಕನ್ನಡ ಆರು ಜಿಲ್ಲೆಗಳಲ್ಲಿ ಜೂನ್ 11ರಂದು ಮಧ್ಯಾಹ್ನ 1:00 ಯಿಂದ ರಾತ್ರಿ 12 ಗಂಟೆವರೆಗೆ ಒಟ್ಟು 1,22,354 ಮಹಿಳೆಯರು ಪ್ರಯಾಣಮಾಡಿದ್ದಾರೆ. ಪ್ರಯಾಣ ಮಾಡಿದ ಬಸ್ ಟಿಕೆಟ್ ದರದ ಮೊತ್ತ ರೂ. 36,17,096 ಗಳಾಗಿದೆ.

ಜಿಲ್ಲಾವಾರು ಮಾಹಿತಿ: ಧಾರವಾಡ ನಗರ ಸಾರಿಗೆ 12,354, ಧಾರವಾಡ ಗ್ರಾಮಾಂತರ 11,780, ಬೆಳಗಾವಿ 34,797, ಬಾಗಲಕೋಟೆ 11,687, ಗದಗ 13,630, ಹಾವೇರಿ 16,656 ಉತ್ತರ ಕನ್ನಡ 8,497 ಎಂದು ಅವರು ತಿಳಿಸಿದ್ದಾರೆ.

ಉಚಿತ ಪ್ರಯಾಣ ಇನ್ನೂ ಸುಲಭ: ಮಹಿಳೆಯರ ಉಚಿತ ಪ್ರಯಾಣವನ್ನು ಮತ್ತಷ್ಟು ಸುಲಭವಾಗಿಸುವ ದೃಷ್ಟಿಯಿಂದ ರಾಜ್ಯದ ವಿಳಾಸವಿರುವ ಭಾವಚಿತ್ರ ಸಹಿತ ಅಧಿಕೃತ ದಾಖಲೆಗಳ ಮೂಲ ಪ್ರತಿ, ನಕಲು, ಡಿಜಿಲಾಕರ್ (ಹಾರ್ಡ್ ಮತ್ತು ಸಾಫ್ಟ್ ಪ್ರತಿ) ಮಾದರಿಯ ಗುರುತಿನ ದಾಖಲೆಗಳನ್ನು ಸಹ ಮಾನ್ಯ ಮಾಡಲು ನಿರ್ಧರಿಸಲಾಗಿದೆ. ಮಹಿಳೆಯರಿಗೆ ಪ್ರಯಾಣ ಉಚಿತ. ಆದರೆ ಟಿಕೆಟ್ ಪಡೆಯುವುದು ಕಡ್ಡಾಯ ಎಂದು ಅವರು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು